Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕೋಟೆ ನಾಡಿನಲ್ಲಿ ಮೊಳಗಿದ ಕನ್ನಡ ಕಹಳೆ : ತಾಯಿ ಭುವನೇಶ್ವರಿ ಭಾವಚಿತ್ರದ ಆಕರ್ಷಕ ಮೆರವಣಿಗೆ

---Advertisement---

 

 

ಚಿತ್ರದುರ್ಗ. ನ.01: ಕೋಟೆ ನಾಡು ಚಿತ್ರದುರ್ಗ ನಗರದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಹಳೆ ಮೊಳಗಿತು. ರಾಜ್ಯೋತ್ಸವದ ಅಂಗವಾಗಿ ಶನಿವಾರ ಆಯೋಜಿಸಲಾದ ತಾಯಿ ಭುವನೇಶ್ವರಿ ಭಾವಚಿತ್ರದ ಆಕರ್ಷಕ ಮೆರವಣಿಗೆ ಜನಮನ ಸೂರೆಗೊಂಡಿತು. ವಿವಿಧ ಇಲಾಖೆಗಳ ಸ್ತಬ್ಧಚಿತ್ರ ಮೆರವಣಿಗೆ ಮಧ್ಯೆ ತೋಟಗಾರಿಕೆ ಇಲಾಖೆಯ ಮದುವನ ಹಾಗೂ ಜೇನು ಸಾಗಣಿಕೆ ಮಹತ್ವ ಸಾರುವ ಬೃಹತ್ ದುಂಬಿ ಸ್ಥಬ್ದಚಿತ್ರ, ಅದರಿಂದ ಹೊರಡುತ್ತಿದ್ದ, ಮಧುವನದ ಗುಂಯ್ಯೀ ಗುಟ್ಟಿದ ದುಂಬಿ ನಿನಾದ ಸರ್ವರರೂ ಆಶ್ಚರ್ಯ ನೋಟದಿಂದ ಮೆರವಣೆಗೆ ಕಡೆ ನೋಡುವಂತೆ ಮಾಡಿತು.

ನಗರದ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ದೇವಸ್ಥಾನದ ಬಳಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸ್ತಬ್ಧಚಿತ್ರ ಮೆರವಣಿಗೆ ಚಾಲನೆ ನೀಡಿದರು.

ದುರ್ಬಲ ವರ್ಗದವರ ಏಳಿಗಾಗಿ ಸರ್ಕಾರ ರೂಪಿಸಿರುವ ಹಲವಾರು ಯೋಜನೆಗಳ ಮಹತ್ವ ಸಾರಿದ ಸಮಾಜ ಕಲ್ಯಾಣ ಸ್ತಬ್ಧಚಿತ್ರ ಪ್ರಥಮ ಪ್ರಶಸ್ತಿಗೆ ಭಾಜನವಾಯಿತು. ತೋಟಗಾರಿಕೆ ಇಲಾಖೆ ಸ್ತಬ್ದಚಿತ್ರ ದ್ವಿತೀಯ ಸ್ಥಾನ ಪಡೆದರೆ, ಶಾಲಾ ವಾಹನಗಳ ಸುರಕ್ಷತೆ ಹಾಗೂ ಬ್ಯಾಟರಿ ಚಾಲಿತ ವಿದ್ಯುತ್ ವಾಹನಗಳ ಬಳಕೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದ ಪ್ರಾದೇಶಿಕ ಸಾರಿಗೆ ಇಲಾಖೆ ಸ್ತಬ್ದಚಿತ್ರ ಮೂರನೇ ಬಹುಮಾನಕ್ಕೆ ಭಾಜನವಾಯಿತು. ಕೆ.ಎಸ್.ಆರ್.ಟಿ ಸ್ತಬ್ದಚಿತ್ರ ಶಕ್ತಿ ಯೋಜನೆ ವಿಶ್ವ ದಾಖಲೆಯನ್ನು ಸ್ಮರಿಸಿತು. 2023 ಜೂನ್ 11 ರಂದು ಚಾಲನೆ ನೀಡಲಾದ ಶಕ್ತಿ ಯೋಜನೆಯಡಿ 2025 ಜೂನ್ 11 ವರೆಗೆ 504 ಕೋಟಿ 90 ಲಕ್ಷ ಬಾರಿ ಮಹಿಳೆಯರು ಸರ್ಕಾರಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ.

ಜಿಲ್ಲೆಯ ಗಣಿಬಾಧಿತ ತಾಲ್ಲೂಕು ವ್ಯಾಪ್ತಿಯಲ್ಲಿ ಕೆ.ಎಂ.ಇ.ಆರ್.ಸಿ ಹಾಗೂ ಸಿಇಪಿಎಂಐಝಡ್ ಅನುದಾನ ಅಡಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ವಿತರಿಸುವ ವಿನೂತನ ಕಾರ್ಯಕ್ರಮದ ಕುರಿತು ಶಿಕ್ಷಣ ಇಲಾಖೆ ಸ್ತಬ್ದಚಿತ್ರ ಮಾಹಿತಿ ನೀಡಿತು.

 

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಕೈಗಾರಿಕೆ ತರಬೇತಿ ಕೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಪ್ರವಾಸೋದ್ಯಮ ಇಲಾಖೆಗಳ ಸ್ತಬ್ದಚಿತ್ರಗಳು ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸಿದವು. ಮೆರವಣಿಗೆಯಲ್ಲಿ ಕಹಳೆ,ವೀರಗಾಸೆ, ತಮಟೆ ವಾದ್ಯ ವೃಂದ,ಡೋಲು,ಲಂಬಾಣಿ ನೃತ್ಯ ಕಲಾತಂಡ, ಸೇವಾದಳ, ವಿವಿಧ ಶಾಲಾ ಮಕ್ಕಳು ಇತರೆ ಸಾಂಸ್ಕøತಿಕ ಕಲಾ ತಂಡಗಳು ಪಾಲ್ಗೊಂಡಿದ್ದವು.

ಮೆರವಣಿಗೆ ಗಾಂಧಿ ವೃತ್ತ, ಕಿತ್ತೂರು ರಾಣಿ ಚನ್ನಮ್ಮ ರಾಣಿ ( ಎಸ್.ಬಿ.ಐ) ವೃತ್ತ, ಮಹಾವೀರ ವೃತ್ತ, ಅಂಬೇಡ್ಕರ್ ವೃತ್ತ, ಒನಕೆ ಓಬವ್ವ ವೃತ್ತದ ಮೂಲಕ ಪೆÇೀಲಿಸ್ ಕವಾಯತು ಮೈದಾನ ತಲುಪಿತು. ಈ ವೇಳೆ ಜಿ.ಪಂ. ಸಿಇಓ ಡಾ.ಆಕಾಶ್, ಪೆÇೀಲೀಸ್ ವರಿμÁ್ಠಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ, ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ಶಿವಕುಮಾರ್, ನಗರ ಸಭೆ ಆಯುಕ್ತೆ ಲಕ್ಷ್ಮೀ, ತಹಶೀಲ್ದಾರ್ ಗೋವಿಂದ ರಾಜ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳೆ ಸಿಂಘೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...