ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ @INCKarnataka ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಪ್ರಶ್ನೆ ಮಾಡಿದ್ದಾರೆ.
ಬಂಡವಾಳಶಾಹಿ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ ‘ಐಎಎಸ್ ಜೀತ ಪದ್ಧತಿ’ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ ‘ರಾಜಕೀಯ, ಆಡಳಿತ ವಸಾಹತುಶಾಹಿ’ಯನ್ನು ದೇಶಕ್ಕೆ ಪರಿಚಯ ಮಾಡಿದೆ. ಹೌದು; ಕಾಂಗ್ರೆಸ್ ಯಾವಾಗಲೂ ಕುಖ್ಯಾತಿಗಳಿಗೇ ಕುಖ್ಯಾತಿ. ಅಂಥ ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ.
135 ಸೀಟು ಕೊಟ್ಟ ತಪ್ಪಿಗೆ ಕನ್ನಡಿಗರಿಗೆ ವಿಪರೀತ ದರ್ಪ ತೋರಿದೆ ಕಾಂಗ್ರೆಸ್. ಸತ್ಯಯುಗದಲ್ಲಿ ಹಿರಣ್ಯಕಶಿಪು ಅಷ್ಟದಿಕ್ಪಾಲಕರನ್ನು ಸೆರೆಹಿಡಿದು ಮೆಟ್ಟಿಲು ಮಾಡಿಕೊಂಡ ಪಾಪಕ್ಕೆ ಸರ್ವನಾಶವಾದ. ಕಾಂಗ್ರೆಸ್ ಕೂಡ 30 ಐಎಎಸ್ ಅಧಿಕಾರಿಗಳನ್ನು ರಾಜಕಾರಣಿಗಳ ದ್ವಾರಪಾಲಕರನ್ನಾಗಿ ಮಾಡುವ ಮೂಲಕ ತನ್ನ ನಾಶಕ್ಕೆ ತಾನೇ ನಾಂದಿ ಹಾಡಿದೆ.
ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಚೆಲ್ಲಾಟ, ರೈತರಿಗೆ ಮರಣ ಸಂಕಟ; ಒಂದೆಡೆ ಅನ್ನದಾತರು ಆತ್ಮಹತ್ಯೆಗಳಿಗೆ ಶರಣಾಗುತ್ತಿದ್ದರೆ, ಈ @INCKarnataka ಪಕ್ಷಕ್ಕೆ ಅಧಿಕಾರದ್ದೇ ಆಟ. ಘಟಬಂಧನ್ ಕಟ್ಟುವುದರಲ್ಲಿ ಇರುವ ಆತುರ, ಅನ್ನ ಕೊಡುವ ರೈತನ ಬದುಕು ಕಟ್ಟುವುದರಲ್ಲಿ ಇಲ್ಲ. ಹೀಗಿದೆ ಇವರ ಗ್ಯಾರಂಟಿ ವರಸೆ ಎಂದು ಟ್ವೀಟ್ ಮಾಡಿದ್ದಾರೆ.