Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆ ಶಿವಕುಮಾರ್ ನಡೆಗೆ ಕನ್ನಡಿಗರಿಂದ ಆಕ್ರೋಶ

ಡಿಕೆ ಶಿವಕುಮಾರ್
---Advertisement---

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನಡೆಗೆ ಇದೀಗ ಕನ್ನಡಿಗರಿಂದ ಆಕ್ರೋಶ ವ್ಯಕ್ತವಾಗಿದೆ. ಬಿಹಾರ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿರುವ ಬಿಹಾರಿಗಳಿಗೆ ವೈಯಕ್ತಿಕವಾಗಿ ಮನವಿಯನ್ನ ಮಾಡಿದ್ದರು. ಇದೀಗ ಕೇರಳದ ಚುನಾವಣೆ ಬರ್ತಾ ಇದ್ದು, ಅದರ ಮುತುವರ್ಜಿಯನ್ನು ವಹಿಸುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗರು ವಿರೋಧ ವ್ಯಕ್ತಪಡಿಸ್ತಾ ಇದ್ದಾರೆ.

ಕಳೆದ ಕೆಲವು ದಿನಗಳ ಹಿಂದಷ್ಟೇ ಬಿಹಾರದ ಚುನಾವಣೆ ನಡೆದಿತ್ತು. ಆ ಚುನಾವಣೆಯ ಸಂದರ್ಭದಲ್ಲೂ ಬೆಂಗಳೂರಿನಲ್ಲಿರುವ ಬಿಹಾರಿಗಳನ್ನು ಭೇಟಿ ಮಾಡಿ, ಕಾಂಗ್ರೆಸ್ ಗೆ ಮತ ನೀಡುವಂತೆ ಮನವಿ ಮಾಡಿದ್ದರು. ಇದೀಗ ಕೇರಳದ ಚುನಾವಣೆ ವಿಚಾರಕ್ಕೂ ಅದೇ ಮಂತ್ರ ಪಠಿಸುತ್ತಿದ್ದಾರೆ.

ಚುನಾವಣೆ ಅಂತ ಬಂದಾಗ ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಅವರಿಗೆ ಸಾಕಷ್ಟು ಜವಾಬ್ದಾರಿಗಳನ್ನ ನೀಡುತ್ತದೆ. ಬೇರೆ ಬೇರೆ ರಾಜ್ಯದ ಚುನಾವಣೆಗಳಲ್ಲಿ ಭಾಗುಯಾಗಿ, ಗೆಲುವು ಸಾಧಿಸುವುದಕ್ಕೆ ಮುಂದೆ ನಿಲ್ಲುವಂತ ಸೂಚನೆಯನ್ನು ನೀಡುತ್ತದೆ. ಅದರಂತೆ ಬಿಹಾರ ಚುನಾವಣೆಯ ಬಗ್ಗೆಯೂ ಒಂದಷ್ಟು ಜವಾಬ್ದಾರಿಯನ್ನು ನೀಡಿತ್ತು. ಈಗ ಡಿಸೆಂಬರ್ ನಲ್ಲಿ ಕೇರಳ ರಾಜ್ಯದ ಚುನಾವಣೆ ಬರ್ತಿರೋ ಕಾರಣ, ಅವರಿಗೆ ಜವಾಬ್ದಾರಿ ನೀಡಿದೆ.

ಕೇರಳ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ-2025 ಡಿಸೆಂಬರ್ ರಂದು ನಡೆಯಲಿದೆ. ಕೇರಳ ರಾಜ್ಯದ ನಿವಾಸಿಗಳು ಸಾಕಷ್ಟು ಸಂಖ್ಯೆಯಲ್ಲಿ ಬೆಂಗಳೂರು ಹಾಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ ಕಂಪನಿಗಳು, ಶಿಕ್ಷಣ ಸಂಸ್ಥೆಗಳು, ವಾಣಿಜ್ಯ ಉದ್ಯಮಿಗಳು, ಹೋಟೆಲ್‌ಗಳು, ಗುತ್ತಿಗೆದಾರರು, ಬಿಲ್ಡರ್‌ಗಳು ಅಂಗಡಿ ಮುಂಗಟ್ಟುಗಳು ಹಾಗೂ ಇತರೆ ಉದ್ಯಮದಾರರು ಕೇರಳ ರಾಜ್ಯದ ಚುನಾವಣೆಯಲ್ಲಿ ಮತವನ್ನು ಚಲಾಯಿಸಲು ಅನುವಾಗುವಂತೆ ಕೇರಳ ರಾಜ್ಯದ ಮತದಾರರಾದವರಿಗೆ ಕನಿಷ್ಟ ಮೂರು ದಿನಗಳ “ವೇತನ ಸಹಿತ ರಜೆ” ಯನ್ನು ನೀಡಲು ಮತ್ತು ಚುನಾವಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸಹಕರಿಸಲು ಕೋರುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬರೆದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now