ನಾಳೆ ನಂದನಹೊಸೂರು ಗ್ರಾಮದಲ್ಲಿ ಕರಿಯಮ್ಮದೇವಿ ದೇವಸ್ಥಾನ ಪ್ರಾರಂಭೋತ್ಸವ

1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆ.12 : ಹೊಳಲ್ಕೆರೆ ತಾಲ್ಲೂಕು ನಂದನಹೊಸೂರು ಗ್ರಾಮದಲ್ಲಿ ಕರಿಯಮ್ಮದೇವಿ ದೇವಸ್ಥಾನ ಪ್ರಾರಂಭೋತ್ಸವ ಹಾಗೂ ನೂತನ ವಿಗ್ರಹ ಪ್ರತಿಷ್ಠಾಪನೆ, ಗೋಪುರ ಕಳಸಾರೋಹಣ ಪ್ರತಿಷ್ಠಾಪನೆ ಫೆ. 13 ರ ಇಂದು ಬೆಳಗಿನ ಜಾವ 5-20 ರಿಂದ 7-30 ರೊಳಗೆ ಬ್ರಾಹ್ಮಿ ಮುಹೂರ್ತದಲ್ಲಿ ನಡೆಯಲಿದೆ.

ಮಧ್ಯಾಹ್ನ 12-20 ರಿಂದ ಕಳಸಾರೋಹಣ, ಸಂಜೆ 7 ಗಂಟೆಯಿಂದ ರಸಮಂಜರಿ. ಮುರುಘಾಮಠದ ಬಸವಪ್ರಭು ಸ್ವಾಮಿಗಳು ಅಧ್ಯಕ್ಷತೆ ವಹಿಸಲಿದ್ದಾರೆ.
ಹೊಸದುರ್ಗ ಕುಂಚಿಟಿಗ ಮಹಾಸಂಸ್ಥಾನ ಮಠದ ಶಾಂತವೀರಸ್ವಾಮೀಜಿ, ಕಬೀರಾನಂದಾಶ್ರಮದ ಶಿವಲಿಂಗಾನಂದ ಮಹಾಸ್ವಾಮಿ, ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆ ಇವರುಗಳು ಸಾನಿಧ್ಯ ವಹಿಸುವರು.

ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಸಮಾರಂಭ ಉದ್ಘಾಟಿಸಲಿದ್ದಾರೆ.  ಮುಖ್ಯ ಅತಿಥಿಗಳಾಗಿ ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕ ಎಂ.ಬಿ.ತಿಪ್ಪೇರುದ್ರಪ್ಪ, ಬಿಜೆಪಿ.ಯುವ ಮುಖಂಡ ಎಂ.ಸಿ.ರಘುಚಂದನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ.ಎಚ್.ಶಿವಕುಮಾರ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮೂಡಲಗಿರಿಯಪ್ಪ, ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ಎಂ.ಪಿ.ಪ್ರವೀಣ್, ಎನ್.ಎಸ್.ರಮೇಶ್ ಇವರುಗಳು ಆಗಮಿಸಲಿದ್ದಾರೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತನು, ಮನ, ಧನದೊಂದಿಗೆ ಸಹಕರಿಸಿ ಕರಿಯಮ್ಮದೇವಿ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಭಕ್ತ ಮಂಡಳಿ ಕೋರಿದೆ.

Share This Article
Leave a Comment

Leave a Reply

Your email address will not be published. Required fields are marked *