Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ: 890 ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

---Advertisement---

ಸುದ್ದಿಒನ್,ಬೆಂಗಳೂರು ಮೇ.06 : ಕರ್ನಾಟಕ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 890 ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ಹೆಸರು: ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ.

ಒಟ್ಟು ಹುದ್ದೆಗಳು: 890.

ವಿದ್ಯಾರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ಕೃಷಿ, ಬಿ.ಟೆಕ್ ಬಯೋಟೆಕ್ ಅಥವಾ ಕೃಷಿ ಇಂಜಿನಿಯರಿಂಗ್ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕನಿಷ್ಠ ವಯಸ್ಸು: 21 ವರ್ಷ.

ಗರಿಷ್ಠ ವಯಸ್ಸು: 40 ವರ್ಷ.

ಸಡಿಲಿಕೆ

ನಿಯಮದಂತೆ ಎಸ್‌ಸಿ/ಎಸ್‌ಟಿ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಮತ್ತು ವಿಧವೆಯರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.

ಅರ್ಜಿ ಶುಲ್ಕ:

ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳಿಗೆ: ರೂ. 750.

ಎಸ್‌ಸಿ/ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ. 500.

ಮಾಜಿ ಸೈನಿಕರಿಗೆ: ರೂ. 250.

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ https://cetonline.karnataka.gov.in/rectwork-flow/ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-05-2026.

ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಲು ಕೋರಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now