ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಯಾವತ್ತು ಅನೌನ್ಸ್ ಆಗಬಹುದು ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಇಂದು 11.30ಕ್ಕೆ ನವದೆಹಲಿಯಲ್ಲಿ ಚುನಾವಣಾ ಆಯುಕ್ತರಾದಂತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಟಿ ನಡೆಸುತ್ತಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಬಗ್ಗೆ ಇಂದು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಲಿದ್ದಾರೆ.
ಎಲ್ಲಾ ರೀತಿಯ ಸಿದ್ಧತೆಗಳ ಬಗ್ಗೆ ಮಾತನಾಡಿದ ಬಳಿಕ, ನಾಮ ಪತ್ರ ಸಲ್ಲಿಕೆ ಆರಂಭ ಯಾವಾಗ..? ನಾಮಪತ್ರಕ್ಕೆ ಕೊನೆ ದಿನಾಂಕ ಈ ಎಲ್ಲಾ ಮಾಹಿತಿಯನ್ನು ನೀಡಲಾಗುತ್ತದೆ. ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆಯಾದ ಬೆನ್ನಲ್ಲೆ ನೀತಿ ಸಂಹಿತೆ ಕೂಡ ಇಂದಿನಿಂದಾನೇ ಆರಂಭವಾಗಲಿದೆ.
ಹೀಗಾಗಿ ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮ ರದ್ದು ಮಾಡಲಾಗಿದೆ. ಬರೀ ಬಿಜೆಪಿಗೆ ಮಾತ್ರವಲ್ಲ ಕಾಂಗ್ರೆಸ್, ಜೆಡಿಎಸ್ ಗೂ ನೀತಿ ಸಂಹಿತೆ ಬಿಸಿ ತಟ್ಟಲಿದೆ. ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ಉದ್ಘಾಟನಾ ಕಾರ್ಯಕ್ರಮ ಇಟ್ಟುಕೊಂಡಿದ್ದರು. ಅದಕ್ಕೂ ನೀತಿ ಸಂಹಿತೆ ಬಿಸಿ ತಟ್ಟುವ ಸಾಧ್ಯತೆ ಇದೆ.
ನೀತಿ ಸಂಹಿತೆ ಘೋಷಣೆಯಾದ ತಕ್ಷಣದಿಂದ ಸರ್ಕಾರಿ ವಾಹನ ಬಳಸುವಂತಿಲ್ಲ. ಸರ್ಕಾರ ಹೊಸ ಯೋಜನೆ ಘೋಷಿಸುವಂತಿಲ್ಲ. ಸಚಿವರು, ಶಾಸಕರು ಯೋಜನೆಗಳನ್ನು ಘೋಷಣೆ ಮಾಡುವಂತಿಲ್ಲ. ಮೇ ಮೊದಲ ವಾರದಲ್ಲಿಯೇ ಚುನಾವಣೆ ನಡೆಯುವ ಸಾಧ್ಯತೆ ಇದೆ.