ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಘೋಷಣೆ ಮಾಡಿದೆ. ಮೇ 10ಕ್ಕೆ ಚುನಾವಣೆ ಮತ್ತು ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 24 ಕೊನೆಯ ದಿನ
ಕರ್ನಾಟಕ ಜನತೆ ಕಾಯುತ್ತಿದ್ದಮನತ ದಿನ ಬಂದೇ ಬಿಟ್ಟಿದೆ. ಮೇ 10 ರಂದು ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಇನ್ನು ನಾಮಪತ್ರ ಸಲ್ಲಿಕೆಯ ಬಗ್ಗೆಯೂ ಮಾಹಿತಿ ನೀಡಿದ್ದಾರೆ.
ಕರ್ನಾಟಕದ 224 ಚುನಾವಣಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಏಪ್ರಿಲ್ 13ರಿಂದ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಏಪ್ರಿಲ್ 21 ಪರಿಶೀಲನೆ. ಏಪ್ರಿಲ್ 24 ನಾಮಪತ್ರ ವಾಪಸ್ ತೆಗೆದುಕೊಳ್ಳಲು ಕೊನೆಯ ದಿನವಾಗಿದೆ.
ಸಧಯ ಮೂರು ಪಕ್ಷಗಳಲ್ಲಿ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದೆ. ಇನ್ನುಳಿದ ಅಭ್ಯರ್ಥಿಗಳ ಪಟ್ಟಿಯನ್ನು ಬೇಗ ಬೇಗ ಫೈನಲ್ ಮಾಡಿಕೊಳ್ಳಬೇಕಾಗಿದೆ. ಅದರ ಜೊತೆಗೆ ಘಟಾನುಘಟಿ ನಾಯಕರು ಇನ್ನು ಕ್ಷೇತ್ರವನ್ನು ಫೈನಲ್ ಮಾಡಿಕೊಳ್ಳಬೇಕಾಗಿದೆ. ಅಬ್ಬರದ ಪ್ರಚಾರಕ್ಕೆ ಇಂದಿನಿಂದ ಬ್ರೇಕ್ ಬಿದ್ದಿದೆ. ಇಂದಿನಿಂದಾನೇ ನೀತಿ ಸಂಹಿತೆ ಜಾರಿಯಲ್ಲಿರಲಿದೆ.