Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಪರೀಕ್ಷೆ ದಿನವೇ ಕರ್ನಾಟಕ ಬಂದ್ : ಶಿಕ್ಷಣ ಸಚಿವರು ಹೇಳಿದ್ದೇನು..?

---Advertisement---

ಬೆಂಗಳೂರು; ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಹಾವಳಿ ವಿರುದ್ಧ ಆಕ್ರೋಶ ಹೊರ ಹಾಕಿರುವ ವಾಟಾಳ್ ನಾಗರಾಜ್, ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.‌ ಮಾರ್ಚ್ 22ಕ್ಕೆ ಕರ್ನಾಟಕ ಬಂದ್ ಮಾಡ್ತೇವೆ ಎಂದಿದ್ದಾರೆ. ಆದರೆ ಅಂದು ಮಕ್ಕಳಿಗೆ ಪರೀಕ್ಷೆಯ ಸಮಯ. ಇಂಥ ಸಮಯದಲ್ಲಿ ಬಂದ್ ಮಾಡಿದ್ರೆ ಮಕ್ಕಳ ಭವಿಷ್ಯ ಏನಾಗುತ್ತೆ ಎಂಬ ಆತಂಕ ಎಲ್ಲರದ್ದು.

ಪರೀಕ್ಷೆ ಮುಗಿದ ಮೇಲೆ ಕರ್ನಾಟಕ ಬಂದ್ ಗೆ ಕರೆ ಕೊಡಬಹುದಿತ್ತು. ಪರೀಕ್ಷೆ ಹಿಂದಿನ ದಿನ ಮಾಡಬಹುದಿತ್ತು. ಆದರೆ ಪರೀಕ್ಷೆ ದಿನವೇ ಬಂದ್ ಗೆ ಕರೆ ನೀಡಿದ್ದಾರೆ. ಪರೀಕ್ಷಾ ದಿನದಂದೆರ ಬಂದ್ ಗೆ ಕರೆ ಕೊಟ್ಟಿದ್ದು ಸರಿಯಲ್ಲ. ಮಕ್ಕಳ ಭವಿಷ್ಯದ ಜೊತೆಗೆ ಆಟವಾಡುವುದು ಸರಿಯಲ್ಲ ಎಂದು ಖಾಸಗಿ ಶಾಲಾ ಒಕ್ಕೂಟ ಆಗ್ರಹಿಸಿದೆ.

ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದು, ಬಂದ್ ನಿಂದಾಗಿ ಮಕ್ಕಳಿಗೆ ಯಾವುದೇ ತೊಂದರೆಯಾಗಲ್ಲ. ತೊಂದರೆ ಆಗದಂತೆ ಹೋರಾಟಗಾರರು ಸಹಕರಿಸುತ್ತಾರೆ. ಹೋರಾಟಗಾರರಿಗೆ ಹೋರಾಟ ಮಾಡುವ ಹಕ್ಕು ಇದ್ದೇ ಇರುತ್ತದೆ. ಮಕ್ಕಳ ಭವಿಷ್ಯಕ್ಕೆ ಯಾವುದೇ ತೊಂದರೆಯಾಗಲ್ಲ. ಯಾವ ಪೋಷಕರು ಸಹ ಗಾಬರಿಯಾಗುವ ಅವಶ್ಯಕತೆ ಇಲ್ಲ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

ಇನ್ನು ಹೋರಾಟಕ್ಕೆ ಬೆಂಬಲ ನೀಡುವ ಬಗ್ಗೆ ಕರವೇ ಬಣದಲ್ಲಿಯೇ ಅಪಸ್ವರವೆದ್ದಿದೆ. ಕರ್ನಾಟಕ ಬಂದ್ ಗೆ ನಮ್ಮ ಬೆಂಬಲವಿದೆ. ಆದರೆ ಯಾವಾಗ ಎಂಬುದನ್ನು ಇನ್ನು ನಿರ್ಧರಿಸಿಲ್ಲ ಎಂದಿದ್ದಾರೆ. ಆದರೆ ವಾಟಾಳ್ ನಾಗರಾಜ್ ನೋಡಿದ್ರೆ ಕರ್ನಾಟಕ ಬಂದ್ ದಿನಾಂಕ ಬದಲಾವಣೆಯಾಗಲ್ಲ ಎಂದು ತಿಳಿಸಿದ್ದಾರೆ. ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಬಂದ್ ವಿಚಾರದಲ್ಲಿ ಹಿಂದೇಟು ಹಾಕುತ್ತಾರಾ ಹೇಗೆ ಎಂಬುದನ್ನು ನೋಡಬೇಕಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment