ಬೆಂಗಳೂರು; ಬೆಳಗಾವಿ ಗಡಿಯಲ್ಲಿ ಎಂಇಎಸ್ ಪುಂಡರ ಪದೇ ಪದೇ ಪುಂಡಾಟ ಮೆರೆಯುತ್ತಿರುವ ಹಿನ್ನೆಲೆ ಮರಾಠಿಗರ ವಿರುದ್ಧ ಕನ್ನಡಿಗರು ಆಕ್ರೋಶ ಹೊರ ಹಾಕಿದ್ದಾರೆ. ಹೀಗಾಗಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ಕೊಟ್ಟಿವೆ. ನಾಳೆ ಬಂದ್ ನಡೆಯಲಿದ್ದು, ಹಲವು ಸಂಘ ಸಂಸ್ಥೆಗಳು ಬಂದ್ ಗೆ ಬೆಂಬಲ ನೀಡಿವೆ. ಖಾಸಗಿ ಸಾರಿಗೆ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿವೆ. ಹೀಗಾಗಿ ಪೊಲೀಸ್ ಇಲಾಖೆ ಸಾರಿಗೆ ಇಲಾಖೆಗೆ ನೋಟೀಸ್ ನೀಡಿದೆ.

ನಾಳೆ ಕನ್ನಡಪರ ಸಂಘಟನೆಗಳು ಮತ್ತು ರಾಜ್ಯದ ವಿವಿಧ ಸಂಘಟನೆಗಳ ವತಿಯಿಂದ ಮರಾಠಿಗರ ಪುಂಡಾಟಿಕೆ, ಎಂಇಎಸ್ ನಿಷೇಧ, ಕಳಸಾ ಬಂಡೂರಿ ಮಹಾದಾಯಿ ಯೋಜನೆ ಆರಂಭ,ಕಲ್ಯಣ ಕರ್ನಾಟಕ ಅಭಿವೃದ್ಧಿ, ಕಂಡಕ್ಟರ್ ಮೇಲೆ ಮರಾಠಿಗರ ದಾಳಿ ಸಮಗ್ರವತನಿಖೆಗೆ ಒತ್ತಾಯಿಸಿ ಕರ್ನಾಟಕ ಬಂದ್ ಗೆ ಕರೆ ಕೊಡಲಾಗಿದೆ. ಈ ಹಿನ್ನಲೆಯಲ್ಲಿ ಪ್ರತಿಭಟನೆ, ಮೆರವಣಿಗೆ, ಮುಷ್ಕರವನ್ನು ಹಮ್ಮಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.

ಅದರ ಭಾಗವಾಗಿ ಹೆಚ್ಚಿನ ಸಂಖ್ಯೆಯಲ್ಲಿ ನೀವೂ ಕಾರ್ಯಕರ್ತರನ್ನು ಸೇರಿಸಿಕೊಂಡು ಟೌನ್ ಹಾಲ್ ಮುಂಭಾಗದಿಂದ ಫ್ರೀಡಂ ಪಾರ್ಕ್ ಗೆ ಮೆರವಣಿಗೆ ಹಮ್ಮಿಕೊಂಡಿರುವುದು ತಿಳಿದು ಬಂದಿದೆ. ಫ್ರೀಡಂ ಪಾರ್ಕ್ ಹೊರತು ಪಡಿಸಿ, ನಗರದ ಉಳಿದ ಕಡೆಗಳಲ್ಲಿ ಸಾರ್ವಜನಿಕ ಸಂಚಾರ ಹಾಗೂ ನೆಮ್ಮದಿಗೆ ಭಂಗವಾಗುವಂತೆ ಪ್ರತಿಭಟನೆ, ಮುಷ್ಕರ, ಮೆರವಣಿಗೆ ಮಾಡುವಂತಿಲ್ಲ. ಈ ಕುರಿತು ಹೈಕೋರ್ಟ್ ಕುಇಡ ಆದೇಶ ನೀಡಿದೆ. ಒಂದು ವೇಳೆ ನ್ಯಾಯಾಲಯದ ಆದೇಶವನ್ನು ಉಲ್ಲಂಗಹಿಸಿದರೆ ತಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಸಂಘ ಸಂಸ್ಥೆಗಳಿಗೆ ನೋಟೀಸ್ ಜಾರಿ ಮಾಡಿದ್ದಾರೆ.

