Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28 ರಿಂದ ದೈಹಿಕ ಪರೀಕ್ಷೆಗಳು ಆರಂಭ

---Advertisement---

ಬೆಂಗಳೂರು.ಸೆಪ್ಟೆಂಬರ್.25 :  ರಾಜ್ಯ ಪೊಲೀಸ್ ನೇಮಕಾತಿ ವಿಭಾಗವು ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬAಧಿಸಿದAತೆ ಅತ್ಯಂತ ಪ್ರಮುಖವಾದ ದೇಹದಾರ್ಡ್ಯ ಪರೀಕ್ಷೆ ಹಾಗೂ ಸಹಿಷ್ಣುತಾ ಪರೀಕ್ಷೆಯ ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.

ಈ ಬೃಹತ್ ನೇಮಕಾತಿ ಅಭಿಯಾನದಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ ವಿವಿಧ ಹಂತಗಳಲ್ಲಿ ಆಯ್ಕೆಯಾಗಿರುವ ಒಟ್ಟು 19,396 ಅರ್ಹ ಅಭ್ಯರ್ಥಿಗಳು ಈ ದೈಹಿಕ ಪರೀಕ್ಷೆಗಳಲ್ಲಿ ಭಾಗವಹಿಸಲಿದ್ದಾರೆ.

ಉಳಿಕೆ ಮೂಲ ವೃಂದದ ಒಟ್ಟು 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಪರೀಕ್ಷೆಗೆ ಅರ್ಹತೆ ಪಡೆದಿದ್ದರೆ, ಕಲ್ಯಾಣ ಕರ್ನಾಟಕ ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.

ಉಳಿಕೆ ಮೂಲ ವೃಂದದ ಪರೀಕ್ಷಾ ವಿವರಗಳು

ಬೆಂಗಳೂರು ನಗರ ಘಟಕ: ಈ ಘಟಕ ವ್ಯಾಪ್ತಿಯಲ್ಲಿ 2,015 ಹುದ್ದೆಗಳಿದ್ದು, ಒಟ್ಟು 9,887 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. ಇವರಿಗೆ 2026 ನೇ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 05 ರವರೆಗೆ ಪರೀಕ್ಷೆ ನಡೆಯಲಿದೆ.

ಪರೀಕ್ಷೆಗಳು ಸಿಎಆರ್ (ಹೆಚ್‌ಕ್ಯೂ) ಚಾಮರಾಜಪೇಟೆಯ ಸಿರ್ಸಿ ಸರ್ಕಲ್ ಮೈದಾನ, ಆಡುಗೋಡಿಯ ಸಿಎಆರ್ (ದಕ್ಷಿಣ) ಮೈದಾನ ಹಾಗೂ ಆರ್.ಕೆ. ಹೆಗಡೆ ನಗರದ ತನಿಷಂದ್ರ ಮುಖ್ಯ ರಸ್ತೆಯಲ್ಲಿರುವ ಸಿಎಆರ್ (ಉತ್ತರ) ಪರೇಡ್ ಮೈದಾನಗಳಲ್ಲಿ ಜರುಗಲಿವೆ.

ಕೇಂದ್ರ ವಲಯ: ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು ಜಿಲ್ಲೆ ಹಾಗೂ ರೈಲ್ವೆ ಘಟಕಗಳನ್ನು ಒಳಗೊಂಡAತೆ 200 ಹುದ್ದೆಗಳಿಗೆ 946 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಇವರ ಪರೀಕ್ಷೆಗಳು 2026 ನೇ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 03 ರವರೆಗೆ ಬೆಂಗಳೂರಿನ ಕೊರಮಂಗಲದ ಮಡಿವಾಳ ಮಾರುಕಟ್ಟೆ ಎದುರು 3ನೇ ಬೆಟಾಲಿಯನ್ ಕೆಎಸ್‌ಆರ್‌ಪಿ ಮೈದಾನದಲ್ಲಿ ನಡೆಯಲಿವೆ.

ದಕ್ಷಿಣ ವಲಯ: ಮೈಸೂರು ನಗರ, ಮೈಸೂರು ಜಿಲ್ಲೆ, ಹಾಸನ, ಕೊಡಗು, ಚಾಮರಾಜನಗರ ಮತ್ತು ಮಂಡ್ಯ ಘಟಕಗಳ 395 ಹುದ್ದೆಗಳಿಗೆ 1,891 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಇವರಿಗೆ 2026 ನೇ  ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 05 ರವರೆಗೆ ಮೈಸೂರಿನ ರೇಸ್ ಕೋರ್ಸ್ ಹಿಂಭಾಗದಲ್ಲಿರುವ ಸಿಟಿ ಆರ್ಮ್ಸ್ ರಿಸರ್ವ್ ಪರೇಡ್ ಮೈದಾನದಲ್ಲಿ ದೈಹಿಕ ಪರೀಕ್ಷೆ ಜರುಗಲಿದೆ.

ಪೂರ್ವ ವಲಯ: ಶಿವಮೊಗ್ಗ, ಹಾವೇರಿ, ದಾವಣಗೆರೆ ಹಾಗೂ ಚಿತ್ರದುರ್ಗ ಘಟಕಗಳ ವ್ಯಾಪ್ತಿಯ 250 ಹುದ್ದೆಗಳಿಗೆ 1,234 ಅಭ್ಯರ್ಥಿಗಳು ಪರೀಕ್ಷೆಗೆ ಅರ್ಹರಾಗಿದ್ದಾರೆ. ಇವರ ಪರೀಕ್ಷೆಯು 2026ನೇ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 06 ರವರೆಗೆ ಶಿವಮೊಗ್ಗದ ನವಿಲೆಯಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈದಾನದಲ್ಲಿ ನಡೆಯಲಿದೆ.

ಪಶ್ಚಿಮ ವಲಯ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಮತ್ತು ಮಂಗಳೂರು ನಗರ ಘಟಕಗಳ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಇವರಿಗೆ 2026 ನೇ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 03 ರವರೆಗೆ ಮಂಗಳೂರಿನ ಲಾಲ್‌ಬಾಗ್‌ನಲ್ಲಿರುವ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಿಗದಿಯಾಗಿದೆ.

ಉತ್ತರ ವಲಯ: ಗದಗ ಹಾಗೂ ಹುಬ್ಬಳ್ಳಿ-ಧಾರವಾಡ ನಗರ ಘಟಕ ಒಳಗೊಂಡ 110 ಹುದ್ದೆಗಳಿಗೆ 549 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. ಇವರಿಗೆ 2026 ನೇ ಸೆಪ್ಟೆಂಬರ್ 29 ಮತ್ತು 30, 2026 ರಂದು ಬೆಳಗಾವಿಯ ವಿಟಿಯು ಹತ್ತಿರದ ಮಚ್ಚೆಯಲ್ಲಿರುವ 2ನೇ ಬೆಟಾಲಿಯನ್ ಕೆಎಸ್‌ಆರ್‌ಪಿ ಮೈದಾನದಲ್ಲಿ ಪರೀಕ್ಷೆ ನಡೆಯಲಿದೆ.

ಬಳ್ಳಾರಿ ವಲಯ: ಬಳ್ಳಾರಿ ಮತ್ತು ರಾಯಚೂರು ಘಟಕಗಳ 30 ಹುದ್ದೆಗಳಿಗೆ 144 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಇವರಿಗೆ ಪರೀಕ್ಷೆಯು 2026 ನೇ ಅಕ್ಟೋಬರ್ 05 ರಿಂದ ಅಕ್ಟೋಬರ್ 06  ರವರೆಗೆ ಕೊಪ್ಪಳದ ಮುನಿರಾಬಾದ್‌ನ ಹೊಸಹಳ್ಳಿ ಬಳಿಯಿರುವ ಕೆಎಸ್‌ಆರ್‌ಪಿ ಪಿ.ಟಿ.ಎಸ್. ಮೈದಾನದಲ್ಲಿ (ಐಆರ್‌ಬಿ ಕ್ಯಾಂಪಸ್) ನಡೆಯಲಿದೆ.

ಕಲ್ಯಾಣ ಕರ್ನಾಟಕ ವೃಂದದ ಪರೀಕ್ಷಾ ವಿವರಗಳು

ಸಿಒಪಿ ಬೆಂಗಳೂರು ನಗರ: ಈ ಭಾಗದ 171 ಹುದ್ದೆಗಳಿಗೆ 833 ಅಭ್ಯರ್ಥಿಗಳು ಅರ್ಹರಾಗಲಿದ್ದು, 2026 ನೇ ಅಕ್ಟೋಬರ್ 08 ರಂದು ಬೆಂಗಳೂರಿನ ಚಾಮರಾಜಪೇಟೆಯ ಸಿಎಆರ್ ಪರೇಡ್ ಮೈದಾನ (ಹೆಚ್‌ಕ್ಯೂ) ಹಾಗೂ ಆಡುಗೋಡಿಯ ಸಿಎಆರ್ ಪರೇಡ್ ಮೈದಾನಗಳಲ್ಲಿ (ದಕ್ಷಿಣ) ಏಕಕಾಲದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.

ಬಳ್ಳಾರಿ ವಲಯ (ಕೆಕೆ ಘಟಕಗಳು): ಕೊಪ್ಪಳ, ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಘಟಕಗಳ 174 ಹುದ್ದೆಗಳಿಗೆ 869 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. ಇವರಿಗೆ 2026ನೇ ಅಕ್ಟೋಬರ್ 12 ರಿಂದ 15 ರವರೆಗೆ ಕೊಪ್ಪಳದ ಮುನಿರಾಬಾದ್ ಹೊಸಹಳ್ಳಿಯಲ್ಲಿರುವ ಕೆಎಸ್‌ಆರ್‌ಪಿ ಪಿ.ಟಿ.ಎಸ್. ಮೈದಾನದಲ್ಲಿ ದೈಹಿಕ ಪರೀಕ್ಷೆ ನಡೆಸಲಾಗುವುದು.

ಈಶಾನ್ಯ ವಲಯ: ಕಲಬುರಗಿ ನಗರ, ಕಲಬುರಗಿ ಜಿಲ್ಲೆ ಹಾಗೂ ಬೀದರ್ ಘಟಕಗಳ 251 ಹುದ್ದೆಗಳಿಗೆ 1,240 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಇವರ ಪರೀಕ್ಷೆಯು 2026ನೇ ಅಕ್ಟೋಬರ್ 12 ರಿಂದ  14 ರವರೆಗೆ ಕಲಬುರಗಿಯ ತಾಜ್ ಸುಲ್ತಾನ್‌ಪುರದಲ್ಲಿರುವ 6ನೇ ಬೆಟಾಲಿಯನ್ ಕೆಎಸ್‌ಆರ್‌ಪಿ ಮೈದಾನದಲ್ಲಿ ನಡೆಯಲಿದೆ.

ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆ

ಪರೀಕ್ಷೆಗೆ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ಕರೆ ಪತ್ರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅರ್ಹ ಅಭ್ಯರ್ಥಿಗಳು ತಮಗೆ ನಿಗದಿಪಡಿಸಿದ ದಿನಾಂಕಗಳAದು ನಿಗದಿತ ದೈಹಿಕ ಪರೀಕ್ಷಾ ಕೇಂದ್ರಗಳಿಗೆ ಕಡ್ಡಾಯವಾಗಿ ವರದಿ ಮಾಡಬೇಕೆಂದು ಪೊಲೀಸ್ ನೇಮಕಾತಿ ವಿಭಾಗವು ಸ್ಪಷ್ಟಪಡಿಸಿದೆ.

Join WhatsApp

Join Now

Join Telegram

Join Now