Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ : ಲಿಖಿತ ಪರೀಕ್ಷೆ ಸಮಯ ಬದಲಾವಣೆ

---Advertisement---

ಬೆಂಗಳೂರು.ಜುಲೈ.30: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪೊಲೀಸ್ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ.

ಆರಂಭದಲ್ಲಿ ಈ ಪರೀಕ್ಷೆಯನ್ನು 2026ರ ಆಗಸ್ಟ್ 2 ಭಾನುವಾರದಂದು ಮಧ್ಯಾಹ್ನ 2:30 ರಿಂದ 4:00 ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಬೆಳಗಿನ ಪರೀಕ್ಷಾ ಕೇಂದ್ರಗಳಿಂದ ಮಧ್ಯಾಹ್ನದ ಪರೀಕ್ಷಾ ಕೇಂದ್ರಗಳಿಗೆ ತಲುಪಲು ದೂರವಾಗುತ್ತಿರುವುದರಿಂದ ತೊಂದರೆಯಾಗುತ್ತಿದೆ ಎಂದು ಹಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದರು. ಅಭ್ಯರ್ಥಿಗಳ ಹಿತದೃಷ್ಟಿಯಿಂದ ಕೆಇಎ ಪರೀಕ್ಷಾ ಸಮಯವನ್ನು ಬದಲಾಯಿಸಿದೆ.

ಪರಿಷ್ಕೃತ ವೇಳಾಪಟ್ಟಿಯಂತೆ, 2026ರ ಆಗಸ್ಟ್ 2ರ ಭಾನುವಾರದಂದು ನಡೆಯಲಿರುವ ಸಾಮಾನ್ಯ ಅಧ್ಯಯನ ಪತ್ರಿಕೆಯ ಪರೀಕ್ಷೆಯು ಈಗ ಸಂಜೆ 4:00 ರಿಂದ ಸಂಜೆ 5:30 ರವರೆಗೆ ನಡೆಯಲಿದೆ. ಈ ಪರೀಕ್ಷೆಯು ಒಟ್ಟು 100 ಪ್ರಶ್ನೆಗಳನ್ನು ಒಳಗೊಂಡಿದ್ದು, 100 ಗರಿಷ್ಠ ಅಂಕಗಳಿಗೆ ನಡೆಯಲಿದೆ. ಇದರಲ್ಲಿ ಸಾಮಾನ್ಯ ಜ್ಞಾನ, ವಿಜ್ಞಾನ, ಭೂಗೋಳ, ಇತಿಹಾಸ, ಭಾರತದ ಸಂವಿಧಾನ, ರಾಷ್ಟ್ರೀಯ ಸ್ವಾತಂತ್ರ್ಯ ಚಳುವಳಿ, ಮಾನಸಿಕ ಸಾಮರ್ಥ್ಯ ಮತ್ತು ನೈತಿಕ ಶಿಕ್ಷಣ ವಿಷಯಗಳ ಮೇಲಿನ ಪ್ರಶ್ನೆಗಳಿರುತ್ತವೆ. ದಿನಾಂಕ 05.06.2026ರ ಅಧಿಸೂಚನೆಯಲ್ಲಿನ ಉಳಿದ ನಿಯಮಗಳು ಹಾಗೂ ಷರತ್ತುಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕೆಇಎ ತನ್ನ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

 

Join WhatsApp

Join Now

Join Telegram

Join Now