ಕೊಪ್ಪಳ: ಬಿಟ್ ಕಾಯಿನ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶ್ರೀಕಿ ಬಂಧನವಾಗಿದ್ದು, ವಿಚಾರಣೆ ನಡೆಯುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮಾತಿನ ಸಮರವೇ ನಡೆಯುತ್ತಿದೆ. ಬಿಟ್ ಕಾಯಿನ್ ವಿಚಾರವಾಗಿ ಇಂದು ಪ್ರಿಯಾಂಕ ಖರ್ಗೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದರು. ಇದೀಗ ಬಿಜೆಪಿ ಸಚಿವ ಈಶ್ವರಪ್ಪ ಪ್ರಿಯಾಂಕ ಖರ್ಗೆಗೆ ತಿತುಗೇಟು ನೀಡಿ, ಸವಾಲು ಎಸೆದಿದ್ದಾರೆ.
ಕೊಪ್ಪಳದಲ್ಲಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ನವರು ಬದುಕಿದ್ದೇವೆಂದು ತೋರಿಸಿಕೊಳ್ಳಲು ಈ ರೀತಿ ಹೇಳಿಕೆಗಳನ್ನ ನೀಡುತ್ತಾರೆ. ಸಿದ್ದರಾಮಯ್ಯ, ಡಿಕೆಶಿ ಬಳಿಕ ಖರ್ಗೆ ಮಾತಾಡುತ್ತಿದ್ದಾರೆ. ಬಿಟ್ ಕಾಯಿನ್ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳಿದ್ರೆ ತೋರಿಸಲಿ ಎಂದು ಸವಾಲಾಕಿದ್ದಾರೆ.
ಬಿಟ್ ಕಾಯಿನ್ ದಂಧೆಯಲ್ಲಿ ಯಾರೇ ಇದ್ರೂ ಕಿತ್ತೆಸೆಯುತ್ತೇವೆ. ಮಂತ್ರಿಗಳು ಯಾರೇ ಇದ್ರೂ ಒಂದು ಕ್ಷಣವೂ ಅವರನ್ನು ನಮ್ಮ ಸರ್ಕಾರದಲ್ಲಿ ಇಟ್ಟುಕೊಳ್ಳುವುದಿಲ್ಲ. ಪ್ರಿಯಾಂಕ್ ಖರ್ಗೆ ವಸೂಲಿ ಕಿಂಗ್ ಹೊರತೂ ಬಿಜೆಪಿ ನಾಯಕರಲ್ಲ. ಗೃಹ ಸಚಿವ ಆರಗ ಜ್ಞಾನೇಂದ್ರ ಯಾವ ವಸೂಲಿಯನ್ನೂ ಮಾಡಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾಗಲ್ಲ. ಬಸವರಾಜ ಬೊಮ್ಮಾಯಿಯವರೇ ಸಿಎಂ ಆಗಿ ಇರುತ್ತಾರೆ ಎಂದು ಹೇಳಿದ್ದಾರೆ.