ಕರ್ನಾಟಕ ಇನ್ನೋವೇಶನ್ & ಟೆಕ್ನಾಲಜಿ ಸೊಸೈಟಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

suddionenews
1 Min Read

ಕರ್ನಾಟಕ ಇನ್ನೋವೇಶನ್ & ಟೆಕ್ನಾಲಜಿ ಸೊಸೈಟಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. 7 ಪ್ರಾಜೆಕ್ಟ್​ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ‌ ಮಾಡಲಾಗಿದೆ. ಮುಂದಿನ ತಿಂಗಳು ಅಂದ್ರೆ ಏಪ್ರಿಲ್ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅಭ್ಯರ್ಥಿಗಳು ಇ-ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಕರ್ನಾಟಕ ಇನ್ನೋವೇಶನ್ & ಟೆಕ್ನಾಲಜಿ ಸೊಸೈಟಿ ನೇಮಕಾತಿ ಅಧಿಸೂಚನೆ ಪ್ರಕಾರ,

* ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

* ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

* ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 45,000 ಸಂಬಳ.

* ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Share This Article
Leave a Comment

Leave a Reply

Your email address will not be published. Required fields are marked *