Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾವೇರಿ ವಿವಾದಕ್ಕೆ ಸಂಧಾನದ ಹೆಜ್ಜೆ: ತಮಿಳುನಾಡು ಸಿಎಂ ವಿಜಯ್‌ಗೆ ಕರ್ನಾಟಕ ಆಹ್ವಾನ

---Advertisement---

ಕಾವೇರಿ ನೀರು ಹಂಚಿಕೆ ಹಾಗೂ ಮೇಕೆದಾಟು ಯೋಜನೆ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ನಡುವಿನ ಭಿನ್ನಾಭಿಪ್ರಾಯ ಮುಂದುವರಿದಿರುವ ನಡುವೆಯೇ, ಸಮಸ್ಯೆಗೆ ಸಂಧಾನದ ಮೂಲಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಆಗಸ್ಟ್‌ 3ರಂದು ನಡೆಯಲಿರುವ ಮಾತುಕತೆಯಲ್ಲಿ ಭಾಗವಹಿಸುವಂತೆ ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಅವರಿಗೆ ಕರ್ನಾಟಕ ಸರ್ಕಾರ ಅಧಿಕೃತ ಆಹ್ವಾನ ನೀಡಿದೆ.

ಈ ಸಂಬಂಧ ಉಭಯ ರಾಜ್ಯಗಳ ನಡುವೆ ಪತ್ರ ವ್ಯವಹಾರ ನಡೆದಿದ್ದರೂ, ಆಹ್ವಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಂದ ಇನ್ನೂ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆಯೇ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿದೆ. ಒಂದು ವೇಳೆ ವಿಜಯ್ ಆಹ್ವಾನ ಸ್ವೀಕರಿಸಿದರೆ, ಕಾವೇರಿ ನೀರು ಹಂಚಿಕೆ, ಮೇಕೆದಾಟು ಯೋಜನೆ ಹಾಗೂ ಉಭಯ ರಾಜ್ಯಗಳ ಹಿತಾಸಕ್ತಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ.

ಇದೇ ವೇಳೆ ಕರ್ನಾಟಕದಲ್ಲಿ ಮುಂದುವರಿದಿರುವ ಬರ ಪರಿಸ್ಥಿತಿಯನ್ನು ಪರಿಗಣಿಸಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಬಾರದು ಎಂದು ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಇತ್ತೀಚೆಗೆ ಸೂಚನೆ ನೀಡಿದೆ. ಜುಲೈ 26ರ ನಂತರ ರಾಜ್ಯದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ, ಜುಲೈ 28ರಂದು ದೆಹಲಿಯಲ್ಲಿ ನಡೆಯಲಿರುವ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ನೀರು ಬಿಡುಗಡೆ ಕುರಿತ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.ಇನ್ನೊಂದೆಡೆ, ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ಕಾವೇರಿ ವಿವಾದ ಮತ್ತೆ ಪ್ರತಿಧ್ವನಿಸಿತು. ಕರ್ನಾಟಕದ ಮೇಕೆದಾಟು ಯೋಜನೆಗೆ ಡಿಎಂಕೆ ಸಂಸದರು ಲೋಕಸಭೆಯಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದರು.

ಈ ಕುರಿತು ನಿಲುವಳಿ ಸೂಚನೆಗೆ ಅವಕಾಶ ನೀಡುವಂತೆ ಒತ್ತಾಯಿಸಿದರೂ, ಸ್ಪೀಕರ್ ಓಂ ಬಿರ್ಲಾ ಅವಕಾಶ ನಿರಾಕರಿಸಿದರು. ಇದರಿಂದ ಆಕ್ರೋಶಗೊಂಡ ಡಿಎಂಕೆ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಕರ್ನಾಟಕ ಸರ್ಕಾರ ಸಂಧಾನದ ಮಾರ್ಗವನ್ನು ಅನುಸರಿಸಿರುವುದು ಕಾವೇರಿ ವಿವಾದದಲ್ಲಿ ಹೊಸ ಬೆಳವಣಿಗೆಯಾಗಿ ಗಮನ ಸೆಳೆಯುತ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now