Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದೇಶಿ ವಿದ್ಯಾರ್ಥಿಗಳ ಮೊದಲ ಆಯ್ಕೆ ಕರ್ನಾಟಕ! ಉನ್ನತ ಶಿಕ್ಷಣದಲ್ಲಿ ದೇಶದಲ್ಲೇ ನಂ.1 ಸ್ಥಾನ

---Advertisement---

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ಮತ್ತೊಮ್ಮೆ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದೆ. ಅಖಿಲ ಭಾರತ ಉನ್ನತ ಶಿಕ್ಷಣ ಸಮೀಕ್ಷೆ (AISHE)ಯ ಇತ್ತೀಚಿನ ವರದಿ ಪ್ರಕಾರ, ವಿದೇಶಿ ವಿದ್ಯಾರ್ಥಿಗಳನ್ನು ಆಕರ್ಷಿಸುವ ರಾಜ್ಯಗಳ ಪೈಕಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನ ಪಡೆದುಕೊಂಡಿದೆ.ಪ್ರಸ್ತುತ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಒಟ್ಟು 7,914 ವಿದೇಶಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಈ ಮೂಲಕ ಕರ್ನಾಟಕ ಅಗ್ರಸ್ಥಾನ ಕಾಯ್ದುಕೊಂಡಿದೆ. 7,902 ವಿದ್ಯಾರ್ಥಿಗಳೊಂದಿಗೆ ಪಂಜಾಬ್ ಎರಡನೇ ಸ್ಥಾನದಲ್ಲಿದ್ದರೆ, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ತಮಿಳುನಾಡು ನಂತರದ ಸ್ಥಾನಗಳನ್ನು ಪಡೆದಿವೆ.

ಕಳೆದ ಐದು ವರ್ಷಗಳಲ್ಲಿ ಭಾರತಕ್ಕೆ ಉನ್ನತ ಶಿಕ್ಷಣಕ್ಕಾಗಿ ಆಗಮಿಸುವ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಸುಮಾರು 19 ಶೇಕಡಾ ಏರಿಕೆ ದಾಖಲಾಗಿದೆ. ಪ್ರಸ್ತುತ 173 ದೇಶಗಳ ವಿದ್ಯಾರ್ಥಿಗಳು ಭಾರತದಲ್ಲಿ ವಿವಿಧ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.ಭಾರತದಲ್ಲಿ ವ್ಯಾಸಂಗ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳ ಪೈಕಿ ನೇಪಾಳದ ವಿದ್ಯಾರ್ಥಿಗಳೇ ಅತಿ ಹೆಚ್ಚು. ಒಟ್ಟು ದಾಖಲಾತಿಯಲ್ಲಿ 24.1 ಶೇಕಡಾ ವಿದ್ಯಾರ್ಥಿಗಳು ನೇಪಾಳದವರಾಗಿದ್ದಾರೆ. ನಂತರ ಅರಬ್ ರಾಷ್ಟ್ರಗಳಿಂದ 7 ಶೇಕಡಾ, ಅಮೆರಿಕ ಮತ್ತು ಬಾಂಗ್ಲಾದೇಶದಿಂದ ತಲಾ 5.9 ಶೇಕಡಾ, ನೈಜೀರಿಯಾದಿಂದ 5.5 ಶೇಕಡಾ ಹಾಗೂ ಜಿಂಬಾಬ್ವೆಯಿಂದ 4 ಶೇಕಡಾ ವಿದ್ಯಾರ್ಥಿಗಳು ಭಾರತವನ್ನು ಶಿಕ್ಷಣದ ತಾಣವಾಗಿ ಆಯ್ಕೆ ಮಾಡಿಕೊಂಡಿದ್ದಾರೆ.

ಇನ್ನೊಂದು ವಿಶೇಷವೆಂದರೆ, ವಿದೇಶಿ ವಿದ್ಯಾರ್ಥಿಗಳು ಸ್ನಾತಕೋತ್ತರ (PG) ಕೋರ್ಸ್‌ಗಳಿಗಿಂತ ಪದವಿ (UG) ಕೋರ್ಸ್‌ಗಳತ್ತ ಹೆಚ್ಚು ಆಸಕ್ತಿ ತೋರಿದ್ದಾರೆ. ಭಾರತದಲ್ಲಿ ವ್ಯಾಸಂಗ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳಲ್ಲಿ 73.6 ಶೇಕಡಾ ಮಂದಿ ಪದವಿ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ.ಅಂಕಿಅಂಶಗಳ ಪ್ರಕಾರ, 2019-20ನೇ ಶೈಕ್ಷಣಿಕ ವರ್ಷದಲ್ಲಿ 48,898 ಇದ್ದ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ, ಇತ್ತೀಚಿನ ವರದಿಯಲ್ಲಿ 58,134ಕ್ಕೆ ಏರಿಕೆಯಾಗಿದೆ. ಈ ಬೆಳವಣಿಗೆ ಭಾರತ, ಅದರಲ್ಲೂ ಕರ್ನಾಟಕ, ಜಾಗತಿಕ ಮಟ್ಟದಲ್ಲಿ ಉನ್ನತ ಶಿಕ್ಷಣದ ಪ್ರಮುಖ ಕೇಂದ್ರವಾಗಿ ಹೊರಹೊಮ್ಮುತ್ತಿರುವುದನ್ನು ಮತ್ತೊಮ್ಮೆ ದೃಢಪಡಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now