Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗಕ್ಕೆ ಆಗಮಿಸಿದ ಕರ್ನಾಟಕ ಜ್ಯೋತಿ ರಥಯಾತ್ರೆ :  ಭವ್ಯ ಮೆರವಣಿಗೆ ಮೆರಗು ತಂದ ವಿವಿಧ ಜಾನಪದ ಕಲಾತಂಡಗಳು

Facebook
Twitter
Telegram
WhatsApp

 

ಚಿತ್ರದುರ್ಗ. ಜುಲೈ10 :  “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಧ್ಯೇಯವಾಕ್ಯದೊಂದಿಗೆ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆ ಚಿತ್ರದುರ್ಗ ನಗರದಲ್ಲಿ ಬುಧವಾರ ವಿಜೃಂಭಣೆಯಿಂದ ನಡೆಯಿತು.

 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಸಭೆ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳು, ಗಣ್ಯರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ನಗರದ ಹೊಳಲ್ಕೆರೆ ರಸ್ತೆಯ ಕನಕವೃತ್ತದಲ್ಲಿ ಸ್ವಾಗತಿಸಿದರು,  ಬಳಿಕ  ವಿವಿಧ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು.

ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ಅದ್ದೂರಿ ಮೆರವಣಿಗೆಗೆ ಚಾಲನೆ ನೀಡಿದರು. ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಿಂದ ಆರಂಭವಾದ ಮೆರವಣಿಗೆಯು ಸಂಗೊಳ್ಳಿ ರಾಯಣ್ಣ ವೃತ್ತ, ಗಾಂಧಿ ವೃತ್ತ, ಎಸ್‍ಬಿಐ ವೃತ್ತ, ಅಂಬೇಡ್ಕರ್ ವೃತ್ತ, ಮದಕರಿ ವೃತ್ತದ ಮಾರ್ಗವಾಗಿ ಒನಕೆ ಓಬವ್ವ ವೃತ್ತದವರೆಗೂ ಸಂಭ್ರಮ, ಸಡಗರದಿಂದ ನಡೆಯಿತು.

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ, ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಹಂಪಿಯಲ್ಲಿ ರಥಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಈಗ ರಥವು ನಮ್ಮ ಚಿತ್ರದುರ್ಗ ಜಿಲ್ಲೆಗೆ ಆಗಮಿಸಿದ್ದು, ಯಾತ್ರೆಗೆ ಜಿಲ್ಲೆಯಲ್ಲಿ ಕನ್ನಡದ ಮನಸುಗಳು ವಿಜೃಂಭಣೆಯಿಂದ ಸ್ವಾಗತ ನೀಡಿವೆ. ಕರ್ನಾಟಕ ಜ್ಯೋತಿ ರಥಯಾತ್ರೆಯು ಜಿಲ್ಲೆಯಾದ್ಯಂತ ಜುಲೈ 14ರವರೆಗೂ ಸಂಚರಿಸಲಿದೆ ಎಂದು ಹೇಳಿದರು.

ಸರ್ಕಾರದ ಆದೇಶದಂತೆ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರದರ್ಶಿಸುವುದು ಕಡ್ಡಾಯವಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ, ನಗರಸಭೆ ಸಹಯೋಗದಲ್ಲಿ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರದರ್ಶಿಸುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದಾಗಿದೆ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಮಹಿಳಾ ಮತ್ತು ಮಕ್ಕಳ  ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ತಹಸಿಲ್ದಾರ್ ಡಾ. ನಾಗವೇಣಿ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಯ ಪದಾಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಇದ್ದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಜೀರ್ಣ, ಮಲಬದ್ಧತೆ ಸಮಸ್ಯೆನ್ನು ಎಂದಿಗೂ ನಿರ್ಲಕ್ಷಿಸಬೇಡಿ : ಇದು ಹೃದಯಕ್ಕೆ ತೊಂದರೆ

ನಮ್ಮ ದೇಹದಲ್ಲಿ ಸಣ್ಣ ಪುಟ್ಟ ಸಮಸ್ಯೆಯಾದರೂ ಕೆಲವೊಂದು ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ. ಸುಮಾರು ಜನಕ್ಕೆ ಅಜೀರ್ಣ ಹಾಗೂ ಮಲಬದ್ಧತೆಯ ಸಮಸ್ಯೆ ಕಾಡುತ್ತಿರುತ್ತದೆ. ಇದು ಕಾಮನ್ ತಾನೇ ಎಂದು ನಿರ್ಲಕ್ಷ್ಯ ಮಾಡಿದರೆ ಅದರಿಂದ ಮುಂದೆ ಹೃದಯಕ್ಕೆ

ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ

ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ: ಈ ರಾಶಿಯವರಿಗೆ ಒಳ್ಳೆಯ ಸಂಬಂಧ ಮದುವೆಗೆ ಒಲೆಯಲಿದೆ ಶುಕ್ರವಾರರಾಶಿ ಭವಿಷ್ಯ -ನವೆಂಬರ್-22,2024 ಸೂರ್ಯೋದಯ: 06:29, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080

ಗೋಲ್ಡ್ ರೇಟ್ ಇಂದು ಕೂಡ ಹೆಚ್ಚಳ : ಗ್ರಾಂಗೆ ಎಷ್ಟು ಏರಿಕೆ ಆಯ್ತು..?

ಬೆಂಗಳೂರು: ಚಿನ್ನ ಬೆಳ್ಳಿಯ ಬೆಲೆಯಲ್ಲಿ ಹಾವು ಏಣಿಯ ಆಟ ಕೆಲ ದಿನದಿಂದ ಕಾಣಿಸ್ತಾ ಇದೆ. ಹಾವು ಮೇಲೇರಿದಂತೆ ಚಿನ್ನದ ಬೆಲೆ ಸರಸರನೆ ಏರುತ್ತಲೆ ಇದೆ. ಇಂದು ಕೂಡ ಇಳಿಕೆಯಾಗದೆ ಏರಿಕೆಯತ್ತಲೇ ಮುಖ ಮಾಡಿದೆ. ಹಾಗಾದ್ರೆ

error: Content is protected !!