Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್!

---Advertisement---

ಬೆಂಗಳೂರು.ಜುಲೈ.27: ರಾಜ್ಯ ಮುಂಗಾರು ಅಧಿವೇಶನದ ಮುಹೂರ್ತ ಕೊನೆಗೂ ನಿಗದಿಯಾಗಿದೆ. ಬರುವ ಆಗಸ್ಟ್ 13 ರಿಂದ ರಾಜ್ಯ ವಿಧಾನಮಂಡಲದ ಮುಂಗಾರು ಕಲಾಪವನ್ನು ಆರಂಭಿಸಲು ತೀರ್ಮಾನಿಸಲಾಗಿದೆ. ರಾಜ್ಯ ವಿಧಾನ ಮಂಡಲ ಮುಂಗಾರು ಅಧಿವೇಶನ ಆಗಸ್ಟ್ 13 ರಿಂದ ನಡೆಯಲಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಆಗಸ್ಟ್ 6 ರಿಂದಲೇ ಕಲಾಪ ನಡೆಸಲು ಆರಂಭಿಕ ರೂಪುರೇಷೆ ಸಿದ್ಧಪಡಿಸಿತ್ತು. ಆದರೆ, ಪೂರ್ಣ ಪ್ರಮಾಣದ ಸಚಿವ ಸಂಪುಟ ಪುನರ್ ರಚನೆಯ ಕಸರತ್ತು ನಿರೀಕ್ಷಿತ ವೇಗದಲ್ಲಿ ನಡೆಯದಿದ್ದದ್ದು ಹಾಗೂ ರಾಜ್ಯದಲ್ಲಿ ಚುನಾವಣಾ ಆಯೋಗದ ವತಿಯಿಂದ ನಡೆಯುತ್ತಿರುವ ಎಸ್.ಐ.ಆರ್ (SIR) ಪ್ರಕ್ರಿಯೆ ಇನ್ನೂ ಪೂರ್ಣಗೊಳ್ಳಬೇಕಿದ್ದ ಹಿನ್ನೆಲೆಯಲ್ಲಿ ಅಧಿವೇಶನವನ್ನು ಕೊಂಚ ಮುಂದೂಡಲಾಗಿದೆ. ಎಸ್.ಐ.ಆರ್ ಪ್ರಕ್ರಿಯೆ ಮುಗಿದ ತಕ್ಷಣವೇ ಕಲಾಪ ನಡೆಸುವುದು ಸೂಕ್ತ ಎಂಬ ತೀರ್ಮಾನಕ್ಕೆ ಬರಲಾಗಿದೆ.

ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದರಿಂದ ಅಧಿವೇಶನವೂ ನೆರವೇರುವುದಿಲ್ಲವೇ ಎಂಬ ಪ್ರಶ್ನೆಗಳು ಎದ್ದಿದ್ದವು. ಆದರೆ ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆಯ ಕಾರ್ಯ ಪೂರ್ಣಗೊಳ್ಳಲಿದ್ದು, ಹೊಸ ಸಚಿವರೊಡನೆ ಸರ್ಕಾರ ಸದನವನ್ನು ಎದುರಿಸಲಿದೆ. ಆಗಸ್ಟ್ 13 ರಿಂದ ಕಲಾಪ ಆರಂಭವಾಗುವುದು ಖಚಿತವಾಗಿದೆ.

Join WhatsApp

Join Now

Join Telegram

Join Now