ನವದೆಹಲಿ: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ದಿನೇ ದಿನೇ ಹೆಚ್ಚಾಗುತ್ತಿದೆ. ಕರ್ನಾಟಕದ ಬಸ್ ಗಳಿಗೆ ಮರಾಠಿಗರು ಮಸಿ ಬಳಿದಿದ್ದಾರೆ. ಸದ್ಯ ಬಸ್ ಸಂಚಾರ ಸ್ಥಗಿತಗೊಂಡಿದೆ. ಹೀಗಿರುವಾಗ, ಮಹಾರಾಷ್ಟ್ರ ಸಂಸದರು ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಧ್ಯಪ್ರವೇಶಿಸಲು ಕೋರಿದ್ದಾರೆ.
ಎನ್ ಸಿ ಪಿ ನಾಯಕಿ ಸುಪ್ರಿಯಾ ಸುಳೆ ನಾಯಕತ್ವದಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಲಾಗಿದೆ. ಈ ಸಭೆಯಲ್ಲಿ ಗಡಿ ವಿವಾದದ ಬಗ್ಗೆ ಚರ್ಚೆ ನಡೆಸಲಾಗಿದೆ. ಕರ್ನಾಟಕದಲ್ಲಿ ಮಹಾರಾಷ್ಟ್ರದವರ ಮೇಲೆ ಹಲ್ಲೆಯಾಗುತ್ತಿದೆ. ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಕೂಡಲೇ ಮಧ್ಯಪ್ರವೇಶ ಮಾಡಬೇಕೆಂದು ಮನವಿ ಮಾಡಿದ್ದಾರೆ.
ಆದ್ರೆ ಈ ವಿಚಾರವಾಗಿ ಕರ್ನಾಟಕದ ಯಾರೊಬ್ಬ ಸಂಸದರು ಗೃಹಮಂತ್ರಿ ಅಮಿತ್ ಶಾ ಬಳಿ ಈ ವಿಚಾರ ಪ್ರಸ್ತಾಪಿಸಿಲ್ಲ. ಲೋಕಸಭೆಯಲ್ಲಿ ಸುಪ್ರಿಯಾ ಸುಳೆ ಸರಣಿ ಆರೋಪ ಮಾಡುತ್ತಿದ್ದಾಗ ಸಂಸದ ಶಿವಕುಮಾರ್ ಉದಾಸಿ ತಿರುಗೇಟು ನೀಡಿದ್ದರು. ಈಗ ಮಹಾರಾಷ್ಟ್ರದವರು ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವರನ್ನು ಭೇಟಿ ಮಾಡಿದ್ದಾರೆ.