Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕದ ಮಾನಸಿಕ ಆರೋಗ್ಯ ಉಪಕ್ರಮ ದೇಶಾದ್ಯಂತ ಜಾರಿ : ಸಚಿವ ಸುಧಾಕರ್

Facebook
Twitter
Telegram
WhatsApp

ಬೆಂಗಳೂರು: ಮಾನ್ಯ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇಂದು ಮಂಡನೆ ಮಾಡಿರುವ ಬಜೆಟ್, ಕೋವಿಡ್ ನಂತರದ ಕಾಲದಲ್ಲಿ ದೇಶದ ಸಮಗ್ರ ಆರ್ಥಿಕ ಸುಧಾರಣೆಗೆ ಒತ್ತು ನೀಡಿದೆ. ಇದರಿಂದಾಗಿ ಜಾಗತಿಕ ಮಟ್ಟದಲ್ಲಿ ಭಾರತ ಸದೃಢವಾಗಿ ಬೆಳೆಯಲು ವೇಗ ದೊರೆತಂತಾಗಿದೆ. ಜೊತೆಗೆ ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ಆದ್ಯತೆ ದೊರೆತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸ್ವಾತಂತ್ರ್ಯದ 100 ನೇ ವರ್ಷದತ್ತ ಸಾಗುತ್ತಿರುವ ಈ ಅಮೃತ ಕಾಲದಲ್ಲಿ, ದೇಶವನ್ನು ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಗೆ ತರಲು ಭದ್ರ ಅಡಿಪಾಯ ಹಾಕುವ ನಿಟ್ಟಿನಲ್ಲಿ ಬಜೆಟ್ ರೂಪಿಸಲಾಗಿದೆ. ಅದರಲ್ಲೂ, ಆರೋಗ್ಯ ಕ್ಷೇತ್ರದಲ್ಲಿ ಹೊಸ ಯೋಜನೆ, ಕ್ರಮಗಳನ್ನು ತಂದು ಜನರ ಜೀವನ ಗುಣಮಟ್ಟ ಅಭಿವೃದ್ಧಿಪಡಿಸಲು ಕ್ರಮ ವಹಿಸಲಾಗಿದೆ. ದೇಶದಲ್ಲಿ ಈವರೆಗೆ 166 ಕೋಟಿಗೂ ಅಧಿಕ ಲಸಿಕೆಗಳನ್ನು ನೀಡುವ ಮೂಲಕ ಜನರ ಜೀವ, ಜೀವನೋಪಾಯ ಎರಡನ್ನೂ ರಕ್ಷಿಸಲಾಗಿದೆ. ಲಸಿಕಾಕಾರಣ ಕೋವಿಡ್ ನಂತರದ ಆರ್ಥಿಕ ಪುಶ್ಚೇತನಕ್ಕೆ ವೇಗ ನೀಡಿದೆ. ಇಂತಹ ಬಜೆಟ್ ನೀಡಿದ ಆರ್ಥಿಕ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು ಎಂದು ಸಚಿವರು ಹೇಳಿದ್ದಾರೆ.

ಕೃಷಿ ಕ್ಷೇತ್ರದಲ್ಲಿ ಬೆಂಬಲ ಬೆಲೆ ಯೋಜನೆಯಡಿ, 2.37 ಲಕ್ಷ ಕೋಟಿ ರೂ. ನಲ್ಲಿ ಬೆಳೆ ಖರೀದಿ ನಡೆಯಲಿದೆ. ಸಹಕಾರಿ ಸಂಘಗಳ ತೆರಿಗೆ ದರವನ್ನು ಶೇ.15 ಕ್ಕೆ ಇಳಿಸಲು ತೀರ್ಮಾನಿಸಲಾಗಿದೆ. ಕಾವೇರಿ ಸೇರಿದಂತೆ 5 ನದಿಗಳ ಜೋಡಣೆಗೆ ಅನುಮತಿ ನೀಡಲಾಗಿದೆ. ಈ ಎಲ್ಲಾ ಕಾರ್ಯಗಳಿಂದಾಗಿ ಕೃಷಿಯ ಸಮಗ್ರ ಸುಧಾರಣೆ ಸಾಧ್ಯವಾಗಲಿದೆ.

*ಮಾನಸಿಕ ಆರೋಗ್ಯಕ್ಕೆ ಒತ್ತು*

ಕೋವಿಡ್ ಬಂದ ನಂತರ ಜನರು ಮಾನಸಿಕ ಒತ್ತಡಕ್ಕೆ ಒಳಗಾಗಿರುವುದನ್ನು ಗಮನಿಸಿರುವ ಕೇಂದ್ರ ಸರ್ಕಾರ, ಇದಕ್ಕಾಗಿ ಬೆಂಗಳೂರಿನ ಪ್ರತಿಷ್ಠಿತ ನಿಮ್ಹಾನ್ಸ್ ಆಸ್ಪತ್ರೆಯನ್ನು ಆರಿಸಿಕೊಂಡು *ನ್ಯಾಷನಲ್ ಟೆಲಿ ಮೆಂಟಲ್ ಹೆಲ್ತ್ ಕಾರ್ಯಕ್ರಮ* ನೀಡುವುದಾಗಿ ತಿಳಿಸಿದೆ. ಇದು ಸಕಾಲಿಕವಾಗಿದ್ದು, ಇಂದಿನ ಯುವಜನತೆಗೆ ಬಹಳ ಉಪಯೋಗವಾಗಲಿದೆ ಎಂದು ಸಚಿವರು ಶ್ಲಾಘಿಸಿದ್ದಾರೆ.

ಕೋವಿಡ್ ನಿಂದ ಅನೇಕರು ಮಾನಸಿಕ ಸಮಸ್ಯೆಗೆ ಒಳಗಾಗಿದ್ದಾರೆ. ರಾಜ್ಯದಲ್ಲಿ ಆರಂಭದಿಂದಲೇ ಮಾನಸಿಕ ಒತ್ತಡಕ್ಕೊಳಗಾದವರನ್ನು ಪತ್ತೆ ಮಾಡಿ ಆಪ್ತ ಸಮಾಲೋಚನೆ ನಡೆಸಲಾಗುತ್ತಿದೆ. ಈವರೆಗೆ, 26.08 ಲಕ್ಷ ಜನರಿಗೆ ಆಪ್ತ ಸಮಾಲೋಚನೆ ಮಾಡಲಾಗಿದೆ.
ಈಗ ಕೇಂದ್ರ ಬಜೆಟ್ ನಲ್ಲಿ ನ್ಯಾಷನಲ್ ಟೆಲಿ ಮೆಂಟಲ್ ಹೆಲ್ತ್ ಕಾರ್ಯಕ್ರಮ ನೀಡಿದ್ದು, ಇದಕ್ಕಾಗಿ ನ್ಯಾಷನಲ್ ಟೆಲಿ ಮೆಂಟಲ್ ಹೆಲ್ತ್ ಸೆಂಟರ್ ಫಾರ್ ಎಕ್ಸ್ ಲೆನ್ಸ್ ಎಂಬ ಕೇಂದ್ರಗಳನ್ನು ಆರಂಭಿಸಲಾಗುತ್ತದೆ. ಈ ಕಾರ್ಯಕ್ರಮವು 23 ಕೇಂದ್ರಗಳನ್ನು ಒಳಗೊಂಡಿರುತ್ತದೆ. ಇದನ್ನು ನಮ್ಮದೇ ಬೆಂಗಳೂರಿನ *ನಿಮ್ಹಾನ್ಸ್* ನಿರ್ವಹಣೆ ಮಾಡಲಿದೆ. ಬೆಂಗಳೂರಿನ ಐಐಐಟಿ ಸಂಸ್ಥೆ ತಾಂತ್ರಿಕ ನೆರವು ನೀಡಲಿದೆ. ಇಂತಹ ಅವಕಾಶವನ್ನು ರಾಜ್ಯಕ್ಕೆ ನೀಡಿರುವುದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು. ಇದರಿಂದಾಗಿ ಮಾನಸಿಕ ಆರೋಗ್ಯದ ನಿರ್ವಹಣೆಯನ್ನು ಭವಿಷ್ಯದಲ್ಲಿ ಕರ್ನಾಟಕ ಮುಂದಾಳತ್ವ ವಹಿಸಿ ಮಾದರಿಯಾಗಿ ನಿಲ್ಲಲಿದೆ ಎಂದು ಸಚಿವರು ಹೇಳಿದ್ದಾರೆ.

ಇಷ್ಟೇ ಅಲ್ಲದೆ, ಪಿಎಂ ಆವಾಸ್ ಯೋಜನೆಯಡಿ 80 ಲಕ್ಷ ಮನೆಗಳ ನಿರ್ಮಾಣ, 400 ವಂದೇ ಭಾರತ್ ರೈಲುಗಳು, ಆಧುನಿಕ ತಂತ್ರಜ್ಞಾನ ಇ-ಪಾಸ್ ಪೋರ್ಟ್ ವ್ಯವಸ್ಥೆ, 2 ಲಕ್ಷ ಅಂಗನವಾಡಿಗಳ ಉನ್ನತೀಕರಣ, ಹೊಸದಾಗಿ 3.8 ಕೋಟಿ ಮನೆಗಳಿಗೆ ನಲ್ಲಿಸಂಪರ್ಕ, ಸೌರ ವಿದ್ಯುತ್‍ಗೆ 19,500 ಕೋಟಿ ರೂ. ಮೊದಲಾದ ಯೋಜನೆಗಳು ದೇಶವನ್ನು ಎಲ್ಲಾ ಆಯಾಮಗಳಿಂದ ಸುಧಾರಣೆ ಮಾಡಲು ಪೂರಕವಾಗಿದೆ ಎಂದು ಸಚಿವರು ಶ್ಲಾಘಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!