ಬೆಳಗಾವಿ: ಇಂದು ವಿಧಾನಪರಿಷತ್ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಗೆದ್ದು ಬೀಗಿದೆ. ಅದರಲ್ಲಿ ವಾಯವ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿಗೆ ಜಯವಾಗಿದೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರಗೆ ಸೋಲಾಗಿದೆ.
ಇನ್ನು ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿಗೆ ಗೆಲುವಾಗಿದೆ. ಬಸವರಾಜ್ ಹೊರಟ್ಟಿ 8 ಬಾರಿ ಗೆದ್ದು ದಾಖಲೆ ನಿರ್ಮಿಸಿದ್ದಾರೆ
ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಶೇ 59, ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಶೇ 70, ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ 80, ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶೇ 84ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿ ಒಟ್ಟು 49 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 2,84,992 ಮತದಾರರು ಇದ್ದಾರೆ.
ವಾಯವ್ಯ ಪದವೀಧರ, ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಿದ್ದವು. ಪಶ್ಚಿಮ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯಲ್ಲಿ ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ ಜಿಲ್ಲೆಗಳಿದ್ದವು. ದಕ್ಷಿಣ ಪದವೀಧರ ಕ್ಷೇತ್ರದ ವ್ಯಾಪ್ತಿಯಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಜಿಲ್ಲೆಗಳಿದ್ದವು.