Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಾಯುವ್ಯದಲ್ಲಿ ಕಾಂಗ್ರೆಸ್, ಪಶ್ಚಿಮದಲ್ಲಿ ಬಿಜೆಪಿ ಭರ್ಜರಿ ಗೆಲುವು : ಬೇರೆ ಕ್ಷೇತ್ರದ ಮಾಹಿತಿಯೂ ಇಲ್ಲಿದೆ..!

Facebook
Twitter
Telegram
WhatsApp

ಬೆಳಗಾವಿ: ಇಂದು ವಿಧಾನಪರಿಷತ್ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಗೆದ್ದು ಬೀಗಿದೆ. ಅದರಲ್ಲಿ ವಾಯವ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿಗೆ ಜಯವಾಗಿದೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರಗೆ ಸೋಲಾಗಿದೆ.

ಇನ್ನು ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿಗೆ ಗೆಲುವಾಗಿದೆ. ಬಸವರಾಜ್ ಹೊರಟ್ಟಿ 8 ಬಾರಿ ಗೆದ್ದು ದಾಖಲೆ ನಿರ್ಮಿಸಿದ್ದಾರೆ

ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಶೇ 59, ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಶೇ 70, ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ 80, ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶೇ 84ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​​ ಸೇರಿ ಒಟ್ಟು 49 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 2,84,992 ಮತದಾರರು ಇದ್ದಾರೆ.

ವಾಯವ್ಯ ಪದವೀಧರ, ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಿದ್ದವು. ಪಶ್ಚಿಮ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯಲ್ಲಿ ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ ಜಿಲ್ಲೆಗಳಿದ್ದವು. ದಕ್ಷಿಣ ಪದವೀಧರ ಕ್ಷೇತ್ರದ ವ್ಯಾಪ್ತಿಯಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಜಿಲ್ಲೆಗಳಿದ್ದವು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!