Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನಾಪತ್ತೆ!

---Advertisement---

 

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ  ಕಾಣೆಯಾಗಿದ್ದಾರೆ.ಮಾಸ್ಟರ್ಸ್‌ ವಿದ್ಯಾರ್ಥಿಯಾಗಿರುವ 22 ವರ್ಷದ ಸಾಕೇತ್‌ ಶ್ರೀನಿವಾಸಯ್ಯ ಕಾಣೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಸ್ಥಳೀಯ ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಸಾಕೇತ್‌ ಶ್ರೀನಿವಾಸಯ್ಯಅಮೆರಿಕದ ಯೂನಿವರ್ಸಿಟಿ ಆಫ್‌ ಕ್ಯಾಲಿಫೋರ್ನಿಯಾ, ಬರ್ಕ್‌ಲೇಯಲ್ಲಿ ಪಿಜಿ ವ್ಯಾಸಂಗ ಮಾಡುತ್ತಿದ್ದಾರೆ. ಅವರು ಫೆ.10ರಂದು ಡ್ವೈಟ್‌ ವೇ ಪ್ರದೇಶದಲ್ಲಿ ಕೊನೆಯಾಗಿ ಕಾಣಿಸಿಕೊಂಡಿದ್ದರು ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

ಪಾರ್ಕ್ ಹಿಲ್ಸ್ ಪಕ್ಕದ‌ಮನೆಯಲ್ಲಿ ಅವರ ಬ್ಯಾಗ್, ಪಾಸ್‌ಪೋರ್ಟ್ ಮತ್ತು ಲ್ಯಾಪ್‌ಟಾಪ್ ಪತ್ತೆಯಾಗಿದೆ ಎಂದು ದಿ ಬರ್ಕ್ಲಿ ಸ್ಕ್ಯಾನರ್ ನ್ಯೂಸ್ ಪೋರ್ಟಲ್ ವರದಿ ಮಾಡಿದೆ.

ಸೋಮವಾರದಿಂದ ಫೋನ್‌ಗೆ ಸಂಪರ್ಕ ಸಾಧ್ಯವಾಗಿಲ್ಲ. ತಾಯಿಗೆ ಕಾಲ್ ಮಾಡಿದ್ದರು ಆದರೆ ವಾಪಸ್ ಕರೆ ಮಾಡಿದಾಗ ಮಗ ಪಿಕ್ ಮಾಡಿಲ್ಲ ಎಂದು ಕುಟುಂಬದವರು ಹೇಳಿದ್ದಾರೆ. ಮಗ ಸಂಪರ್ಕಕ್ಕೆ ಸಿಗದಿರುವುದರಿಂದ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ.

ಕಾಣೆಯಾಗಿರುಗ ಸಾಕೇತ್ ಅವರ ತಂದೆ ತುಮಕೂರು ಭಾಗದವರು ಮತ್ತು ತಾಯಿ ಚಿಕ್ಕಮಗಳೂರು ಭಾಗದವರು. ಅವರು ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ಹೋಗಿದ್ದರು. ಅಲ್ಲಿ ಅವರು ಪಂಜಾಬ್ ಮೂಲದ ರೂಮ್‌ಮೇಟ್‌ನೊಂದಿಗೆ ಇದ್ದರು. ಎಲ್ಲರೊಂದಿಗೂ ಚೆನ್ನಾಗಿ ಇದ್ದರು ಎಂದು ಹೇಳಲಾಗುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...