ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ಕಾಣೆಯಾಗಿದ್ದಾರೆ.ಮಾಸ್ಟರ್ಸ್ ವಿದ್ಯಾರ್ಥಿಯಾಗಿರುವ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಕಾಣೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಸ್ಥಳೀಯ ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ಸಾಕೇತ್ ಶ್ರೀನಿವಾಸಯ್ಯಅಮೆರಿಕದ ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಬರ್ಕ್ಲೇಯಲ್ಲಿ ಪಿಜಿ ವ್ಯಾಸಂಗ ಮಾಡುತ್ತಿದ್ದಾರೆ. ಅವರು ಫೆ.10ರಂದು ಡ್ವೈಟ್ ವೇ ಪ್ರದೇಶದಲ್ಲಿ ಕೊನೆಯಾಗಿ ಕಾಣಿಸಿಕೊಂಡಿದ್ದರು ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.
ಪಾರ್ಕ್ ಹಿಲ್ಸ್ ಪಕ್ಕದಮನೆಯಲ್ಲಿ ಅವರ ಬ್ಯಾಗ್, ಪಾಸ್ಪೋರ್ಟ್ ಮತ್ತು ಲ್ಯಾಪ್ಟಾಪ್ ಪತ್ತೆಯಾಗಿದೆ ಎಂದು ದಿ ಬರ್ಕ್ಲಿ ಸ್ಕ್ಯಾನರ್ ನ್ಯೂಸ್ ಪೋರ್ಟಲ್ ವರದಿ ಮಾಡಿದೆ.
ಸೋಮವಾರದಿಂದ ಫೋನ್ಗೆ ಸಂಪರ್ಕ ಸಾಧ್ಯವಾಗಿಲ್ಲ. ತಾಯಿಗೆ ಕಾಲ್ ಮಾಡಿದ್ದರು ಆದರೆ ವಾಪಸ್ ಕರೆ ಮಾಡಿದಾಗ ಮಗ ಪಿಕ್ ಮಾಡಿಲ್ಲ ಎಂದು ಕುಟುಂಬದವರು ಹೇಳಿದ್ದಾರೆ. ಮಗ ಸಂಪರ್ಕಕ್ಕೆ ಸಿಗದಿರುವುದರಿಂದ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ.
ಕಾಣೆಯಾಗಿರುಗ ಸಾಕೇತ್ ಅವರ ತಂದೆ ತುಮಕೂರು ಭಾಗದವರು ಮತ್ತು ತಾಯಿ ಚಿಕ್ಕಮಗಳೂರು ಭಾಗದವರು. ಅವರು ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ಹೋಗಿದ್ದರು. ಅಲ್ಲಿ ಅವರು ಪಂಜಾಬ್ ಮೂಲದ ರೂಮ್ಮೇಟ್ನೊಂದಿಗೆ ಇದ್ದರು. ಎಲ್ಲರೊಂದಿಗೂ ಚೆನ್ನಾಗಿ ಇದ್ದರು ಎಂದು ಹೇಳಲಾಗುತ್ತಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















