ಮುಂಬೈ: ಕರ್ನಾಟಕ ಗಡಿ ವಿವಾದ ನಿಲ್ಲುವಂತೆ ಕಾಣುತ್ತಿಲ್ಲ. ಮಹಾರಾಷ್ಟ್ರದ ಮಂದಿ ಆಗಾಗ ಬಸ್ ಗೆ ಕಲ್ಲು ಹೊಡೆಯುವುದು, ಮಸಿ ಬಳಿಯುವ ಕೆಲಸ ಮಾಡುತ್ತಿದ್ದರು. ಈ ಕ್ಯಾತೆ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ಇದೀಗ ಮಹಾರಾಷ್ಟ್ರ ಸಿಎಂ ಕರ್ನಾಟಕ ಗಡಿ ಭಾಗದ ಒಂದಿಂಚು ಜಾಗವನ್ನು ಬಿಡುವುದಿಲ್ಲ ಎಂದು ಸವಾಲು ಹಾಕಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕರ್ನಾಟಕ ಗಡಿ ವಿವಾದ ಚರ್ಚೆಗೆ ಬಂದಿದೆ. ಸಿಎಂ ಏಕನಾಥ್ ಶಿಂಧೆ ಸರ್ಕಾರವೂ ಕಾನೂನಾತ್ಮಕ ನಿರ್ಣಯ ಮಂಡಿಸಿತ್ತು. ಸರ್ಕಾರದ ಈ ನಿಲುವನ್ನು ಸಿಎಂ ಬೊಮ್ಮಾಯಿ ಸೇರಿದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡ ಖಂಡಿಸಿದ್ದರು. ಕರ್ನಾಟಕದ ಒಂದಿಂಚೂ ಜಾಗವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡಲ್ಲ ಎಂದು ವಾಗ್ದಾಳಿ ನಡೆಸಿದರು.
ಇನ್ನು ಕರ್ನಾಟಕದ ನಿಲುವಿಗೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಕರ್ನಾಟಕ ನಮಗೆ ಸವಾಲು ಹಾಕಬಾರದು. ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್ ಸೇರಿದಂತೆ 865 ಹಳ್ಳಿಗಳಲ್ಲಿ ಒಂದು ಇಂಚು ಭೂಮಿಯನ್ನು ಬಿಡುವುದಿಲ್ಲ. ಅದಕ್ಕಾಗಿ ನಾವೂ ಕಾನೂನು ರೀತಿಯಲ್ಲಿ ಏನುಬೇಕಾದರೂ ಮಾಡುತ್ತೇವೆ ಎಂದು ತಿಳಿಸಿದ್ದಾರೆ.