Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ : ಮತ ಚಲಾಯಿಸಲು ಪರ್ಯಾಯ ದಾಖಲೆ

---Advertisement---

ಚಿತ್ರದುರ್ಗ. ಅ.21: ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾನವು ಅಕ್ಟೋಬರ್ 23 ರಂದು ನಡೆಯಲಿದೆ. ಈ ಚುನಾವಣೆಯಲ್ಲಿ ಮತದಾರರು ತಮ್ಮ ಗುರುತಿಗಾಗಿ ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿಯ (EPIC) ಜೊತೆಗೆಯೂ 10 ಪರ್ಯಾಯ ದಾಖಲೆಗಳನ್ನು ಬಳಸಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.

ಮತದಾರರು ತಮ್ಮ ಗುರುತಿಗಾಗಿ ಮತದಾರರ ಗುರುತಿನ ಚೀಟಿಯ ಪರ್ಯಾಯವಾಗಿ ಆಧಾರ್ ಕಾರ್ಡ್, ಚಾಲನಾ ಪರವಾನಗಿ, ಪಾನ್ ಕಾರ್ಡ್, ಭಾರತೀಯ ಪಾಸ್‌ಪೋರ್ಟ್, ಕೇಂದ್ರ/ರಾಜ್ಯ ಸರ್ಕಾರ ಅಥವಾ ಸಾರ್ವಜನಿಕ ವಲಯದ ಉದ್ಯೋಗಿಗಳಿಗೆ ನೀಡುವ ಸೇವಾ ಗುರುತಿನ ಚೀಟಿ, ಸಂಸದರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಅಧಿಕೃತ ಗುರುತಿನ ಚೀಟಿ, ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳು ನೀಡುವ ಸೇವಾ ಗುರುತಿನ ಚೀಟಿ, ವಿಶ್ವವಿದ್ಯಾಲಯದ ಮೂಲ ಪದವಿ/ಡಿಪ್ಲೊಮಾ ಪ್ರಮಾಣಪತ್ರ, ವಿಕಲಚೇತನರ ಪ್ರಮಾಣಪತ್ರ‌ ಅಥವಾ ಕೇಂದ್ರ ಸರ್ಕಾರದ ಯು.ಡಿ.ಐ.ಡಿ (UDID) ಕಾರ್ಡ್‌ಗಳಲ್ಲಿ ಯಾವುದಾದರೂ ಒಂದನ್ನು ಹಾಜರುಪಡಿಸಬಹುದಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now