Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ರಾಜ್ಯ ವಕೀಲರ ಪರಿಷತ್ ಚುನಾವಣೆ : ಚಿತ್ರದುರ್ಗದ ರಾಜಣ್ಣ ಎರಡನೇ ಬಾರಿಗೆ ಆಯ್ಕೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜೂನ್‌. 22 : ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಸದಸ್ಯರಾಗಿ ಬೆಂಗಳೂರು ಉಚ್ಚ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ತಾಲ್ಲೂಕಿನ ಮಾಡನಾಯಕನಹಳ್ಳಿ ಗ್ರಾಮದ ಆರ್. ರಾಜಣ್ಣ ಅವರು ಸತತ ಎರಡನೇ ಬಾರಿಗೆ
ಆಯ್ಕೆಯಾಗಿದ್ದಾರೆ.

ಪರಿಷತ್ತಿನ 23 ಸದಸ್ಯ ಸ್ಥಾನಗಳಿಗೆ ಮಾರ್ಚ್ 11ರಂದು ಚುನಾವಣೆ ನಡೆದು, ಮಾರ್ಚ್ 16ರಿಂದ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಿತ್ತು. ಬುಧವಾರ (ಜೂನ್ 17)ರ ವರೆಗಿನ ಮತ ಎಣಿಕೆ ಫಲಿತಾಂಶದಂತೆ ಆರ್. ರಾಜಣ್ಣ ಅವರು ಜಯಗಳಿಸಿದ್ದಾರೆ. ಈ ಮೂಲಕ ಸತತ ಎರಡನೇ ಬಾರಿಗೆ ಅವರು ವಕೀಲರ ಪರಿಷತ್ತಿನ ಸದಸ್ಯರಾಗಿ ಚುನಾಯಿತರಾಗಿದ್ದಾರೆ. ಈ ಚುನಾವಣೆಯಲ್ಲಿ ಒಟ್ಟು149 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಕರ್ನಾಟಕ ರಾಜ್ಯದ್ಯಂತ ಎಲ್ಲಾ ವಕೀಲರು ಮತ ಚಲಾಯಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now