Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

---Advertisement---

ಸುದ್ದಿಒನ್,ಬೆಂಗಳೂರು,ಮೇ.26: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನೀಡಲಾಗುವ ಪ್ರತಿಭಾ ಪುರಸ್ಕಾರಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಸಂಘದ ರಾಜ್ಯ ಅಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2026ನೇ ಸಾಲಿನ SSLC ಮತ್ತು PUC ಪರೀಕ್ಷೆಗಳಲ್ಲಿ ಶೇಕಡಾ 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳನ್ನು ಪ್ರೋತ್ಸಾಹಿಸಲು ಈ ಪ್ರತಿಭಾ ಪುರಸ್ಕಾರವನ್ನು ಆಯೋಜಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಪ್ರಮುಖ ವಿವರಗಳು:

ಅರ್ಹತೆ: 2026ರ SSLC ಅಥವಾ PUC ಪರೀಕ್ಷೆಯಲ್ಲಿ 90% ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2026

ಅರ್ಜಿ ಸಲ್ಲಿಸಬೇಕಾದ ಅಧಿಕೃತ ಲಿಂಕ್: https://powermedia.info

Join WhatsApp

Join Now

Join Telegram

Join Now