ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 22 : ಮಾದಿಗ ಸಮುದಾಯದ ವಿದ್ಯಾರ್ಥಿನಿ ವರ್ಷಿತಾಳ ಮೇಲೆ ಅತ್ಯಾಚಾರವೆಸಗಿ ಸುಟ್ಟು ಹಾಕಿರುವ ದುಷ್ಟಶಕ್ತಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕರ್ನಾಟಕ ರಾಜ್ಯ ಮಾದಿಗ ಯುವ ಸೇನೆಯಿಂದ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಶುಕ್ರವಾರ ಮನವಿ ಅರ್ಪಿಸಲಾಯಿತು.
ವಿದ್ಯಾರ್ಥಿನಿ ವರ್ಷಿತಾಳ ಹತ್ಯೆಗೆ ಸಂಬಂಧಿಸಿದಂತೆ ಚೇತನ್ ಎಂಬುವನನ್ನು ಬಂಧಿಸಿದ್ದು, ಇದರ ಹಿಂದೆ ಯಾರ್ಯಾರ ಕೈವಾಡವಿದೆ ಎನ್ನುವುದನ್ನು ಸಂಪೂರ್ಣ ತನಿಖೆ ನಡೆಸಿ ಕಾಮುಕರನ್ನು ಬಯಲಿಗೆಳೆಯಬೇಕು. ವರ್ಷಿತಾಳ ಕುಟುಂಬಕ್ಕೆ ಐದು ಎಕರೆ ಜಮೀನು ಮಂಜೂರು ಮಾಡಿ ಒಬ್ಬರಿಗೆ ಸರ್ಕಾರಿ ಉದ್ಯೋಗ ಕೊಡಬೇಕೆಂದು ಕರ್ನಾಟಕ ರಾಜ್ಯ ಮಾದಿಗ ಯುವ ಸೇನೆ ಸಮಿತಿ ಅಧ್ಯಕ್ಷ ಬಿ.ಓ.ಗಂಗಾಧರಪ್ಪ ಮನವಿ ಮಾಡಿದರು. ಉಪಾಧ್ಯಕ್ಷ ಬಿ.ರಾಜಪ್ಪ, ಜೆ.ಪ್ರಸನ್ನ, ಕರಿಬಸವಯ್ಯ, ರುದ್ರಮುನಿ, ನ್ಯಾಯವಾದಿ ವೆಂಕಟೇಶ್ ಇನ್ನು ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















