ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದಿಂದ ಪ್ರವಾಸಿ ಮಂದಿರದಲ್ಲಿ ಗುರುವಾರ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು.
ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದ ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ಜಿಲ್ಲಾಧ್ಯಕ್ಷ ರಶೀದ್‍ಸಾಬ್ ಪಿಂಜಾರ ಸಮಾಜ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಹಿಂದುಳಿದಿದ್ದು, ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಅನೇಕ ವರ್ಷಗಳಿಂದಲೂ ಹೋರಾಟ ಮಾಡಿಕೊಂಡು ಬರಲಾಗುತ್ತಿದ್ದರೂ ಸರ್ಕಾರ ನಮ್ಮನ್ನು ನಿರ್ಲಕ್ಷಿಸುತ್ತಿರುವುದರಿಂದ ಪಿಂಜಾರ ಜನಾಂಗ ಸಂಘಟಿತರಾಗಬೇಕಿದೆ ಎಂದು ಹೇಳಿದರು.
ನದಾಫ್/ಪಿಂಜಾರ ಸಂಘದ ತಾಲ್ಲೂಕು ಅಧ್ಯಕ್ಷ ಇಮಾಮ್‍ಸಾಬ್, ಕಾರ್ಯದರ್ಶಿ ಮುಜಾಹಿದ್ ಪಿ.ಓ. ಹಾಜಿ ಆರ್.ದಾದಾಪೀರ್, ಬುಡೇನ್‍ಸಾಬ್, ಸಕೀನಾಬಿ, ಮಸ್ತಾನ್‍ಸಾಬ್, ವೈ.ಹೆಚ್.ಹುಸೇನ್‍ಪೀರ್‍ಸಾಬ್, ಮುಸ್ತಫ ಇನ್ನು ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












