Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ : ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ

Facebook
Twitter
Telegram
WhatsApp

 

ದಾವಣಗೆರೆ (ಸೆ.08) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2022-23ನೇ ಶೈಕ್ಷಣಿಕ ಸಾಲಿನ (ಜುಲೈಅವೃತಿ) ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಲಿಬ್.ಐಎಸ್ಸಿ, ಬಿ.ಸಿ.ಎ, ಬಿ.ಬಿ.ಎ, ಎಂ.ಎ, ಎಂ.ಕಾಂ,ಎಂ.ಎ, ಎಂ.ಸಿ.ಜೆ, ಎಂ.ಲಿಬ್.ಐ.ಎಸ್ಸಿ, ಎಂ.ಬಿ.ಎ, ಎಂ.ಎಸ್ಸಿ, ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು ಪಿ.ಜಿ.ಡಿಪ್ಲೊಮಾ

, ಡಿಪ್ಲೋಮಾ, ಸರ್ಟಿಫಿಕೇಟ್, ಕೋರ್ಸಗಳಿಗೆ ಪ್ರವೇಶಾತಿ ಪ್ರಕ್ರಿಯೆಯು ಈಗಾಗಲೇ ಜೂ.20 ರಿಂದ ಆರಂಭವಾಗಿರುತ್ತದೆ.

ಆಸಕ್ತ ವಿದ್ಯಾರ್ಥಿಗಳು ಕ.ರಾ.ಮು.ವಿ.ಯ ಅಧಿಕೃತ ವೆಬ್‍ಸೈಟ್
www.ksoumysuru.ac.in  ಮೂಲಕ ಮೇಲ್ಕಂಡ ಪದವಿಗಳಿಗೆ ಕೋರ್ಸಗಳಿಗೆ  ಆನ್‍ಲೈನ್ ಅಡ್ಮಿಷನ್ ಪೋರ್ಟಲ್  ಮೂಲಕ ಅರ್ಜಿಯನ್ನು ಭರ್ತಿ ಮಾಡಿ,  ದಾವಣಗೆರೆ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್‍ಲೈನ್ ಮುಖಾಂತರ ಪ್ರವೇಶಾತಿ ಶುಲ್ಕವನ್ನು ಪಾವತಿಸಿ ಪ್ರವೇಶಾತಿಯನ್ನು ಪಡೆಯಬಹುದಾಗಿದೆ. ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿನಿಯರಿಗೆ, ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ  ಮತ್ತು ಆಟೋ, ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುವುದು. ಕೋವಿಡ್-19 ನಿಂದ ಮೃತಪಟ್ಟವರ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ, ದೃಷ್ಠಿಹೀನ ವಿದ್ಯಾರ್ಥಿಗಳಿಗೆ (ಬಿ.ಇಡಿ, ಎಂ.ಬಿ.ಎ ಕೋರ್ಸ್‍ಗಳನ್ನು ಹೊರತುಪಡಿಸಿ) ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ.

ದಾವಣಗೆರೆ, ಹಾವೇರಿ ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್

www.ksoumysuru.ac.in
ವೀಕ್ಷಿಸುವುದು ಅಥವಾ ಮೊ.ನಂ. 9916009318, 8095939359, 6363739884, 9008905457 ಕರೆ ಮಾಡುವುದು ನಂತರ ಕ.ರಾ.ಮು.ವಿ. ಪ್ರಾದೇಶಿಕ ಕೇಂದ್ರ ಜೆ.ಹೆಚ್.ಪಟೇಲ್ ಬಡಾವಣೆ, ಶ್ಯಾಮನೂರು ಹಿಂಬಾಗ, ನಾಗನೂರು ರಸ್ತೆಯಲ್ಲಿರುವ ಕಛೇರಿಗೆ ಖುದ್ದು ಭೇಟಿ ಮಾಡುವಂತೆ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!