Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ

---Advertisement---

ಚಿತ್ರದುರ್ಗ. ಜುಲೈ17: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2025-26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಲಿಬ್, ಬಿ.ಸಿ.ಎ, ಬಿ.ಬಿ.ಎ, ಬಿ.ಎಸ್.ಡಬ್ಲ್ಯೂ, ಎಂ.ಎ, ಎಂ.ಕಾಂ, ಎಂ.ಎ, ಎಂ.ಸಿ.ಜೆ, ಎಂ.ಲಿಬ್, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು ಪಿಜಿ ಡಿಪ್ಲೊಮಾ, ಡಿಪ್ಲೊಮಾ ಸರ್ಟಿಫಿಕೇಟ್ ಕೋರ್ಸ್‍ಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶಾತಿ ಪ್ರಕ್ರಿಯೆಯು ಈಗಾಗಲೇ 2025ರ ಜುಲೈ 01 ರಿಂದ ಪ್ರಾರಂಭವಾಗಿರುತ್ತದೆ.

 

ಆಸಕ್ತ ವಿದ್ಯಾರ್ಥಿಗಳು ವಿವಿಧ ಪದವಿ, ಕೋರ್ಸ್‍ಗಳ ಪ್ರವೇಶಾತಿಗೆ ಆನ್‍ಲೈನ್ ಅಡ್ಮಿಷನ್ ಪೋರ್ಟ್‍ಲ್ https://ksouportal.com/views/studentHome.aspx     ನಲ್ಲಿ ಆನ್‍ಲೈನ್ ಮೂಲಕ ಪ್ರವೇಶಾತಿಯ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಿ, ತದನಂತರ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಚೇರಿಯನ್ನು ಖುದ್ದಾಗಿ ಭೇಟಿ ನೀಡಿ ಆನ್‍ಲೈನ್ ಮುಖಾಂತರ ಪ್ರವೇಶಾತಿ ಶುಲ್ಕವನ್ನು ಪಾವತಿಸಿ, ಪ್ರವೇಶಾತಿ ಪಡೆಯಬಹುದಾಗಿದೆ.

 

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ, ಕ್ಯಾಬ್ ಚಾಲಕರು ಮತ್ತು ಅವರ ಹೆಂಡತಿ ಮತ್ತು ಇಬ್ಬರು ಮಕ್ಕಳಿಗೆ, ಕೆಎಸ್‍ಆರ್‍ಟಿಸಿ ಸಾರಿಗೆ ಸಂಸ್ಥೆಯ ಎಲ್ಲಾ ನೌಕರರಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ಇರುತ್ತದೆ. ಅಲ್ಲದೇ ಕೋವಿಡ್-19 ನಿಂದ ಮೃತಪಟ್ಟವರ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ, ಪೂರ್ಣ ಪ್ರಮಾಣದ ದೃಷ್ಠಿಹೀನ ವಿದ್ಯಾರ್ಥಿಗಳಿಗೆ (ಬಿ.ಇಡಿ, ಎಂ.ಬಿ.ಎ ಕೋರ್ಸುಗಳನ್ನು ಹೊರತುಪಡಿಸಿ) ಪೂರ್ಣ ಶುಲ್ಕದ ವಿನಾಯಿತಿ ಇರುತ್ತದೆ. ಅಲ್ಲದೇ ಎರಡು ಶೈಕ್ಷಣಿಕ ಕೋರ್ಸ್‍ಗಳನ್ನು ಏಕಕಾಲದಲ್ಲಿ ಒಂದು ಭೌತಿಕ ಕ್ರಮದಲ್ಲಿ ಮತ್ತೊಂದು ದೂರಶಿಕ್ಷಣ ಕ್ರಮದಲ್ಲಿ ಓದಲು ಅವಕಾಶವಿರುತ್ತದೆ.

ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿಯ ಅಂತಿಮ ದಿನಾಂಕದೊಳಗೆ ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆದುಕೊಳ್ಳಬಹುದು.

 

ಹೆಚ್ಚಿನ ಮಾಹಿತಿಗಾಗಿ    ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ www.ksoumysuru.ac.in ವೀಕ್ಷಿಸುವುದು ಅಥವಾ ಮೊಬೈಲ್ ಸಂಖ್ಯೆ 9738014893, 7204352581, 9008905457, 8310111244, 9972499704, 8277205613 ಗೆ ಕರೆ ಮಾಡವುದು ಅಥವಾ ಖುದ್ದಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಪ್ರಾದೇಶಿಕ ನಿರ್ದೇಶಕಿ ಬಿ.ಆರ್.ರಾಧಿಕಾ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment