ಚಿತ್ರದುರ್ಗ. ಏ. 04: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2025-26ನೇ ಶೈಕ್ಷಣಿಕ ಸಾಲಿನ ಜನವರಿ ಅವೃತ್ತಿಯ ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಲಿಬ್‍ಐಎಸ್ಸಿ, ಬಿ.ಸಿ.ಎ, ಬಿ.ಬಿ.ಎ, ಬಿ.ಎಸ್.ಡಬ್ಲ್ಯೂ, ಎಂ.ಎ, ಎಂ.ಕಾಂ, ಎಂ.ಎ.ಎಂ.ಸಿ.ಜೆ, ಎಂ.ಲಿಬ್‍ಐಎಸ್ಸಿ, ಎಂ.ಬಿ.ಎ, ಎಂ.ಎಸ್ಸಿ, ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ, ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು ಪಿಜಿ-ಡಿಪ್ಲೊಮೊ, ಡಿಪ್ಲೊಮೊ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಆನ್‍ಲೈನ್ ಅಡ್ಮಿಷನ್ ಪೋರ್ಟಲ್ (https://ksouportal.com/views/StudentHome.aspx) ಮೂಲಕ ಅರ್ಜಿ ಸಲ್ಲಿಸಿ ಪ್ರವೇಶಾತಿ ಪಡೆಯಲು ಏಪ್ರಿಲ್ 10 ಕೊನೆಯ ದಿನವಾಗಿದೆ.

ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿಯ ಅಂತಿಮ ದಿನದೊಳಗೆ ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಚಿತ್ರದುರ್ಗ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಡಾ.ಕೆ.ಪಿ.ಮಹಾಲಿಂಗಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ www.ksoumysuru.ac.in ವೀಕ್ಷಿಸುವುದು ಅಥವಾ ಮೊಬೈಲ್ ಸಂಖ್ಯೆ 9738014893, 7204352581, 9008905457, 8310111244, 9972499704, 7090762378 ಗೆ ಕರೆ ಮಾಡುವುದು ಅಥವಾ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.















