ಚಿತ್ರದುರ್ಗ,(ಜ.24) : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರ್ನಾಟಕ ರಾಜ್ಯ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ದಾವಣಗೆರೆ ಪೂರ್ವ ವಲಯದಿಂದ ಭಾಗವಹಿಸಿದ್ದ ಚಿತ್ರದುರ್ಗದ ಕ್ರೀಡಾಪಟುಗಳು ಕಬ್ಬಡ್ಡಿ ತಂಡದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಸ್ಪರ್ಧೆಯಲ್ಲಿ ವಿಜೇತರಾದ ಕ್ರೀಡಾಪಟುಗಳಾದ ತಂಡದ ನಾಯಕ ರಮೇಶ್ ಡಿಜಿ, ರಂಗಸ್ವಾಮಿ.ಎಸ್, ಮಹಮದ್ ಮುಸ್ತಫಾ.ಎಚ್, ಶಿವಕುಮಾರ್. ಪಿ, ಹಾಗೂ ಎಲ್ಲಾ ಅಧಿಕಾರಿ ಸಿಬ್ಬಂದಿಗೆ ಎಸ್‌ಪಿ ಪರುಶುರಾಮ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ನಗರದ ಎಸ್ ಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿಜೇತ ಕ್ರೀಡಾಪಟುಗಳಿಗೆ ಪ್ರಶಂಸಾ ಪತ್ರ ಹಾಗೂ ನಗದು ಬಹುಮಾನ ನೀಡಿ ಗೌರವಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮಾನ್ಯ DYSP ಗಣೇಶ್, ಪೊಲೀಸ್ ಇನ್ಸ್ ಪೆಕ್ಟರ್ ಬಾಲಚಂದ್ರ ನಾಯಕ್, ರುದ್ರೇಶ್(RPI),
ಯುವರಾಜ(RPI), PSI ವಿಶ್ವನಾಥ್, ಮತ್ತು ವೆಂಕಟಾಚಲ ಈ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಕ್ರೀಡಾಪಟು ಗಳಿಗೆ ಶುಭಕೋರಿದರು.

