ಚಿತ್ರದುರ್ಗ(ನ.02) : ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿಗೆ ಬಸವ ಬೆಳಗು, ವಿದೇಶ ವಿದ್ಯಾವಿಕಾಸ, ಜೀವಜಲ, ಕಾಯಕ ಕಿರಣ ಹಾಗೂ ಸ್ವ-ಸಹಾಯ ಸಂಘಗಳಿಗೆ ಉತ್ತೇಜನ ಸೇರಿದಂತೆ ಐದು ಯೋಜನೆಗಳಿಗೆ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಇಚ್ಚಿಸುವ ವೀರಶೈವ ಲಿಂಗಾಯತ ಸಮುದಾಯದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.
ಅರ್ಜಿದಾರರು ಪ್ರವರ್ಗ-3ಬಿ ವರ್ಗಕ್ಕೆ ಸೇರಿದವರಾಗಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
ಅರ್ಹ ಫಲಾಪೇಕ್ಷಿಗಳು ಹತ್ತಿರದ ಗ್ರಾಮ ಒನ್ ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಫೋರ್ಟಲ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ. ನಿಗಮದ ವೆಬ್‍ಸೈಟ್
www.kvldcl.karnataka.gov.in ನಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದು.
ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮದಿಂದ ಯೋಜನೆಯ ಪ್ರಯೋಜನೆ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕøರಿಸಲಾಗುವುದು. ಸರ್ಕಾರದ ವಿವೇಚನಾ ಕೋಟಾ ಮತ್ತು ಅಧ್ಯಕ್ಷರ, ನಿರ್ದೇಶಕರ ಮಂಡಳಿಯು ವಿವೇಚನಾ ಕೋಟದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾನುಭವಿಗಳು ಸಹ ಕಡ್ಡಾಯವಾಗಿ ಸೇವಾಸಿಂಧು ಫೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗದಮ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.