ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಳಗಾವಿ, ಡಿಸೆಂಬರ್ 10: ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸುವ ಕೂಗು ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಅವರು ಇಂದು ಬೆಳಗಾವಿಯಲ್ಲಿ ಈ ರೀತಿ ಪ್ರತಿಕ್ರಿಯೆ ನೀಡಿದರು.
*ಹೋರಾಟಕ್ಕೆ ವಿರೋಧವಿಲ್ಲ*
ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಪಂಚಮಸಾಲಿ ಸಮುದಾಯದ ಮುಖಂಡರನ್ನು ಚರ್ಚೆಗೆ ಕರೆದಿದ್ದರೂ, ಅವರು ಆಗಮಿಸಿಲ್ಲ. ಪ್ರಜಾಪ್ರಭುತ್ವದಲ್ಲಿ ಹೋರಾಟ ಕೈಗೊಳ್ಳಲು ಅವಕಾಶವಿದ್ದು, ಹೋರಾಟಕ್ಕೆ ನಮ್ಮ ವಿರೋಧವಿಲ್ಲ ಎಂದರು.
*ನಾಳೆ ಅಂತ್ಯಕ್ರಿಯೆಯಲ್ಲಿ ಭಾಗಿ*
ಹಿರಿಯ ನಾಯಕ ಎಸ್ ಎಂ ಕೃಷ್ಣ ಅವರು ಅವರು ದಕ್ಷ ಆಡಳಿತಗಾರ . ವಿಧಾನ ಸಭೆ, ವಿಧಾನ ಪರಿಷತ್ತು, ಲೋಕಸಭೆ ಹಾಗೂ ರಾಜ್ಯಸಭೆಗಳ ಸದಸ್ಯರಾಗಿದ್ದ ಎಸ್ ಎಂ ಕೃಷ್ಣ ಅವರು ಸುದೀರ್ಘ ರಾಜಕೀಯ ಅನುಭವ ಹೊಂದಿದ್ದರು. ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ವಿಧಾನಸಭೆ ಸ್ಪೀಕರ್ ಆಗಿ , ರಾಜ್ಯಪಾಲರಾಗಿ ಕೆಲಸ ಮಾಡಿರುವ ಸಜ್ಜನ ರಾಜಕಾರಣಿಯಾಗಿದ್ದರು. ಡಾ. ರಾಜ್ ಕುಮಾರ್ ಅವರ ಅಪಹರಣದ ಸವಾಲನ್ನು ಸಮರ್ಥವಾಗಿ ಎದುರಿಸಿದ್ದರು. 92 ವರ್ಷದ ಎಸ್ ಎಂ ಕೃಷ್ಣ ಅವರು ಕಳೆ ದ ಆರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ನಿಧನದಿಂದ ರಾಜ್ಯ ಧೀಮಂತ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿ ದೊರೆಯಲಿಹಾಗೂ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು. ಎರಡು ತಿಂಗಳ ಹಿಂದೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅವರನ್ನು ಭೇಟಿಯಾಗಿದ್ದೆ. ರಾಜ್ಯದಲ್ಲಿ ನಾಳೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದ್ದು, ಮೂರು ದಿನ ಶೋಕಾಚರಣೆ ಇರಲಿದೆ. ನಾಳೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿರುವುದಾಗಿ ತಿಳಿಸಿದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್