Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದ ಆರ್ಥಿಕತೆಯ ಅಧೋಗತಿ: ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯದ ಭವಿಷ್ಯ ಅಡಮಾನ : ಅನೀತ್ ಕುಮಾರ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ ಮಾ. 06 : “ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು” ಕೊಡುತ್ತೇವೆ ಎಂದು ಬೊಗಳೆ ಬಿಟ್ಟು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ  ಸರ್ಕಾರ ಇಂದು ಕರ್ನಾಟಕದಲ್ಲಿ “ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲ” ಎಂಬ ಸ್ಥಿತಿ ನಿರ್ಮಿಸಿದೆ ಎಂದು ವಾಣಿಜ್ಯೋದ್ಯಮಿಗಳು ಬಿಜೆಪಿ ಯುವ ಮುಖಂಡರಾದ ಅನೀತ್ ಕುಮಾರ್ ಜಿ ಎಸ್ ದೂರಿದ್ದಾರೆ.

ರಾಜ್ಯು ಸರ್ಕಾರದಲ್ಲಿ ಸಿದ್ದರಾಮಯ್ಯ ರವರು ಇಂದು ಮಂಡಿಸಿದ ಆಯವ್ಯಯದ ಬಗ್ಗೆ ಪ್ರತಿಕ್ರಿಯಿಸಿದ ಅವರು,  ಜನರ ಕೆಂಗಣ್ಣಿಗೆ ಗುರಿಯಾಗಿ ಮುಜುಗರಕ್ಕೀಡಾಗುವ ಪರಿಸ್ಥಿತಿ ಬಂದಾಗಲೆಲ್ಲ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜನರನ್ನು ದಿಕ್ಕು ತಪ್ಪಿಸುವ ಚಳಿಯನ್ನು ಬಜೆಟ್‌ನಲ್ಲಿಯೂ ಮುಂದುವರೆಸಿರುವ ಸಿದ್ದರಾಮಯ್ಯನವರು ಬಜೆಟ್ ಭಾಷಣದಲ್ಲೂ ಅದೇ ಚಾಳಿ ಪ್ರದರ್ಶನ ಮಾಡಿದ್ದಾರೆ. ರಾಜ್ಯದ ಆರ್ಥಿಕ ಭವಿಷ್ಯಕ್ಕೆ ಸ್ಪಷ್ಟ ದಿಕ್ಕು ನೀಡಬೇಕಾದ ಬಜೆಟ್‌ನಲ್ಲಿ ವಾಸ್ತವ ಸ್ಥಿತಿಗತಿಗಳನ್ನು ಪ್ರಾಮಾಣಿಕವಾಗಿ ಹೇಳುವ ಬದಲು ಕಟ್ಟು ಕಥೆಗಳನ್ನು ಹೇಳುತ್ತಾ ಕಾಲಹರಣ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರದ ಸಾಲದ ಪ್ರಮಾಣವೇ ಅದರ ಆರ್ಥಿಕ ನಿರ್ವಹಣೆಯ ನಿಜ ಮುಖವನ್ನು ಬಯಲಿಗೆಳೆಯುತ್ತದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...