Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದ ಗೆಲುವು ಮೋದಿಯಿಂದ ಸಾಧ್ಯ.. ‘ಯಪ್ಪ’ನ ಮುಖ ನೋಡಿ ವೋಟ್ ಹಾಕಲ್ಲ : ಮತ್ತೆ ಯಡಿಯೂರಪ್ಪ ವಿರುದ್ಧ ಯತ್ನಾಳ್ ಕಿಡಿ

---Advertisement---

ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಪುತ್ರ ವಿಜಯೇಂದ್ರ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯಾವಾಗಲೂ ಕಿಡಿಕಾರುತ್ತಲೇ ಇರುತ್ತಾರೆ. ಇದೀಗ ಮತ್ತೆ ಯಡಿಯೂರಪ್ಪ ವಿರುದ್ಧ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಕರ್ನಾಟಕದಲ್ಲಿ ನರೇಂದ್ರ ಮೋದಿಯವರ ಹೆಸರಿಗೆ ವೋಟು ಹಾಕುತ್ತಾರೆ ವಿನಃ, ಯಾವ ‘ಯಪ್ಪ’ನ ಮುಖ ನೋಡಿಯೂ ವೋಟ್ ಹಾಕುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

 

ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಯತ್ನಾಳ್ ಅವರು, ನಾನು ದೆಹಲಿಗೆ ಯಾರ ಭೇಟಿಗೂ ಹೋಗಿಲ್ಲ, ಯಾರ appointment ಕೂಡ ತೆಗೆದುಕೊಂಡಿಲ್ಲ. ಯಾರ appointment ಕೂಡ ಬೇಕಿಲ್ಲ. ನಾನು ನನ್ನ ವೈಯಕ್ತಿಕ ಕೆಲಸಕ್ಕೆ ಹೋಗಿದ್ದೆ. ಕಾರ್ಖಾನೆ ವಿಚಾರಕ್ಕೆ ಹೋಗಿದ್ದೆ. ಈ ವೇಳೆ ಶೋಭಾ ಕರಂದ್ಲಾಜೆ, ಜೋಶಿ ಸೇರಿದಂತೆ ಇತರೆ ಸಂಸದರನ್ನು ಭೇಟಿಯಾಗಿದ್ದೇನೆ ಅಷ್ಟೇ.

 

ವಿಜಯೇಂದ್ರ ಇರುವುದರಿಂದ 35 ಲೋಕಸಭಾ ಸೀಟುಗಳು ಬರುತ್ತವೆ ಎಂದು ಹೊಗಳಿ ನನ್ನದೇನು ಗಂಟು ಹೋಗುತ್ತದೆ. 28 ಕ್ಷೇತ್ರಗಳು ಇದ್ದರು 35 ಕ್ಷೇತ್ರಗಳು ಬರುತ್ತವೆ ಎಂದು ಹೇಳಿದ್ದೀರಿ. ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆಯೇ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತದೆ‌. ಯಾ ಯಪ್ಪಂದು ಏನು ಇಲ್ಲ. ಇವರ ಮುಖ ನೋಡಿ ಯಾರೂ ವೋಟು ಹಾಕಲ್ಲ. ನನ್ನ ಹೋರಾಟ ವಂಶವಾರು, ಭ್ರಷ್ಟಾಚಾರ ಹಾಗೂ ಅಡ್ಜೆಸ್ಟ್ಮೆಂಟ್ ಗಳ ವಿರುದ್ಧವಾಗಿದೆ. ಇವುಗಳ ಮೇಲಿನ ನನ್ನ ಹೋರಾಟ ನಿರಂತರವಾಗಿರುತ್ತದೆ‌. ನನಗೆ ಯಾರೋ ಬೈದು ಇಲ್ಲ, ಎಚ್ಚರಿಕೆಯನ್ನು ನೀಡಿಲ್ಲ. ಗಂಭೀರವಾದ ಎಚ್ಚರಿಕೆಯನ್ನು ಯಾವನು ಕೊಟ್ಟಿಲ್ಲ ಎಂದೇ ಪ್ರತಿಕ್ರಿಯೆ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment