Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಶೇ.60 ರಷ್ಟು ಕನ್ನಡ ಕಡ್ಡಾಯ ನಾಮಫಲಕ ಅಳವಡಿಸುವಂತೆ ಕರುನಾಡ ವಿಜಯಸೇನೆ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 30 : ಸರ್ಕಾರದ ಆದೇಶದಂತೆ ಶೇ.60 ರಷ್ಟು ಕನ್ನಡ ಕಡ್ಡಾಯ ನಾಮಫಲಕಗಳನ್ನು ಅಳವಡಿಸುವಂತೆ ಕರುನಾಡ ವಿಜಯಸೇನೆಯಿಂದ ಅಪರ ಜಿಲ್ಲಾಧಿಕಾರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವ್ಯಾಪಾರ ವಹಿವಾಟು ನಡೆಸುವ, ಸಂಘ ಸಂಸ್ಥೆಗಳು, ಖಾಸಗಿ ಆಸ್ಪತ್ರೆ, ಶಾಲಾ-ಕಾಲೇಜು, ಬಸ್‍ನಿಲ್ದಾಣ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ನಾಮ ಫಲಕಗಳನ್ನು ಅಳವಡಿಸುವಂತೆ ಸಾಕಷ್ಟು ಹೋರಾಟ ಮಾಡಿ, ಇಂಗ್ಲಿಷ್ ನಾಮಫಲಕಗಳಿಗೆ ಮಸಿ ಬಳಿದು ಕೇಸು ಹಾಕಿಸಿಕೊಂಡಿದ್ದೇವೆ. ಆದರೂ ಕನ್ನಡ ನಾಮಫಲಕಗಳನ್ನು ಅಳವಡಿಸದೆ ಕನ್ನಡ ಭಾಷೆಯನ್ನು ಕಡೆಗಣಿಸಲಾಗುತ್ತಿದೆ. ಜರೂರಾಗಿ ಕ್ರಮ ಕೈಗೊಳ್ಳುವಂತೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಅಪರ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.

ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಜಗದೀಶ್, ಚಂದನ ಆರ್, ಕಮಲಮ್ಮ, ಅವಿನಾಶ್, ಅಖಿಲೇಶ್ ಇವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now