ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ನವೆಂಬರ್. 30 : ಸರ್ಕಾರದ ಆದೇಶದಂತೆ ಶೇ.60 ರಷ್ಟು ಕನ್ನಡ ಕಡ್ಡಾಯ ನಾಮಫಲಕಗಳನ್ನು ಅಳವಡಿಸುವಂತೆ ಕರುನಾಡ ವಿಜಯಸೇನೆಯಿಂದ ಅಪರ ಜಿಲ್ಲಾಧಿಕಾರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವ್ಯಾಪಾರ ವಹಿವಾಟು ನಡೆಸುವ, ಸಂಘ ಸಂಸ್ಥೆಗಳು, ಖಾಸಗಿ ಆಸ್ಪತ್ರೆ, ಶಾಲಾ-ಕಾಲೇಜು, ಬಸ್‍ನಿಲ್ದಾಣ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ನಾಮ ಫಲಕಗಳನ್ನು ಅಳವಡಿಸುವಂತೆ ಸಾಕಷ್ಟು ಹೋರಾಟ ಮಾಡಿ, ಇಂಗ್ಲಿಷ್ ನಾಮಫಲಕಗಳಿಗೆ ಮಸಿ ಬಳಿದು ಕೇಸು ಹಾಕಿಸಿಕೊಂಡಿದ್ದೇವೆ. ಆದರೂ ಕನ್ನಡ ನಾಮಫಲಕಗಳನ್ನು ಅಳವಡಿಸದೆ ಕನ್ನಡ ಭಾಷೆಯನ್ನು ಕಡೆಗಣಿಸಲಾಗುತ್ತಿದೆ. ಜರೂರಾಗಿ ಕ್ರಮ ಕೈಗೊಳ್ಳುವಂತೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಅಪರ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.
ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಜಗದೀಶ್, ಚಂದನ ಆರ್, ಕಮಲಮ್ಮ, ಅವಿನಾಶ್, ಅಖಿಲೇಶ್ ಇವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
