ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 15 : ಸರ್ಕಾರಿ ಶಾಲೆ ಮಕ್ಕಳಿಗೆ ಕೂಡಲೆ ಶೂ ವಿತರಿಸಲು ಅಧಿವೇಶನದಲ್ಲಿ ಹಣ ಬಿಡುಗಡೆಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‍ಗೆ ಕರುನಾಡ ವಿಜಯಸೇನೆಯಿಂದ ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳನ್ನು ಕೆಡವಿ ಗುಣಮಟ್ಟದ ಕಟ್ಟಡಗಳನ್ನು ನಿರ್ಮಿಸಬೇಕು. ಪೋಷಕರು ಮತ್ತು ಮಕ್ಕಳು ಸರ್ಕಾರಿ ಶಾಲೆಗಳತ್ತ ಆಕರ್ಷಿತರಾಗುವಂತೆ ಸರ್ಕಾರಿ ಶಾಲೆಗಳನ್ನು ಹೈಟೆಕ್ ಶಾಲೆಗಳನ್ನಾಗಿ ಪರಿವರ್ತಿಸಬೇಕು. ಸರ್ಕಾರಿ ಶಾಲೆಗಳು ಸ್ವಚ್ಚವಾಗಿರಬೇಕಾದರೆ ಡಿ.ಗ್ರೂಪ್ ನೌಕರರನ್ನು ನೇಮಕ ಮಾಡಿಕೊಳ್ಳಬೇಕು. ಬೆಂಗಳೂರಿನ ಕೆಂಗೇರಿಯ ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ಸಾಹಸ ಸಿಂಹ ಡಾ.ವಿಷ್ಣುವರ್ಧನ್‍ರವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮಗೊಳಿಸಿರುವುದರಿಂದ ಅಭಿಮಾನಿಗಳ ಮನಸ್ಸಿಗೆ ನೋವುಂಟಾಗಿದೆ. ಅದಕ್ಕಾಗಿ ಅದೇ ಸ್ಥಳದಲ್ಲಿ ಸಮಾಧಿ ಮರು ನಿರ್ಮಿಸಬೇಕೆಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.
ಕರುನಾಡ ವಿಜಯಸೇನೆ ಪ್ರಧಾನ ಕಾರ್ಯದರ್ಶಿ ಎಸ್.ಗೋಪಿನಾಥ್, ಕಾರ್ಯದರ್ಶಿ ಜಗದೀಶ್, ಅವಿನಾಶ್, ಸುರೇಶ್, ಶಶಿಧರ್, ಅಖಿಲೇಶ್ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.
