Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಲಾ ಮಕ್ಕಳಿಗೆ ಶೂ ವಿತರಣೆ, ವಿಷ್ಣುವರ್ಧನ್ ಸಮಾಧಿ ಮರು ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಕರುನಾಡ ವಿಜಯಸೇನೆ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 15 : ಸರ್ಕಾರಿ ಶಾಲೆ ಮಕ್ಕಳಿಗೆ ಕೂಡಲೆ ಶೂ ವಿತರಿಸಲು ಅಧಿವೇಶನದಲ್ಲಿ ಹಣ ಬಿಡುಗಡೆಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‍ಗೆ ಕರುನಾಡ ವಿಜಯಸೇನೆಯಿಂದ ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳನ್ನು ಕೆಡವಿ ಗುಣಮಟ್ಟದ ಕಟ್ಟಡಗಳನ್ನು ನಿರ್ಮಿಸಬೇಕು. ಪೋಷಕರು ಮತ್ತು ಮಕ್ಕಳು ಸರ್ಕಾರಿ ಶಾಲೆಗಳತ್ತ ಆಕರ್ಷಿತರಾಗುವಂತೆ ಸರ್ಕಾರಿ ಶಾಲೆಗಳನ್ನು ಹೈಟೆಕ್ ಶಾಲೆಗಳನ್ನಾಗಿ ಪರಿವರ್ತಿಸಬೇಕು. ಸರ್ಕಾರಿ ಶಾಲೆಗಳು ಸ್ವಚ್ಚವಾಗಿರಬೇಕಾದರೆ ಡಿ.ಗ್ರೂಪ್ ನೌಕರರನ್ನು ನೇಮಕ ಮಾಡಿಕೊಳ್ಳಬೇಕು. ಬೆಂಗಳೂರಿನ ಕೆಂಗೇರಿಯ ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ಸಾಹಸ ಸಿಂಹ ಡಾ.ವಿಷ್ಣುವರ್ಧನ್‍ರವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮಗೊಳಿಸಿರುವುದರಿಂದ ಅಭಿಮಾನಿಗಳ ಮನಸ್ಸಿಗೆ ನೋವುಂಟಾಗಿದೆ. ಅದಕ್ಕಾಗಿ ಅದೇ ಸ್ಥಳದಲ್ಲಿ ಸಮಾಧಿ ಮರು ನಿರ್ಮಿಸಬೇಕೆಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.

ಕರುನಾಡ ವಿಜಯಸೇನೆ ಪ್ರಧಾನ ಕಾರ್ಯದರ್ಶಿ ಎಸ್.ಗೋಪಿನಾಥ್, ಕಾರ್ಯದರ್ಶಿ ಜಗದೀಶ್, ಅವಿನಾಶ್, ಸುರೇಶ್, ಶಶಿಧರ್, ಅಖಿಲೇಶ್ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment