Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಜ್ಞಾನಗಂಗೋತ್ರಿ ವಿಶ್ವವಿದ್ಯಾಲಯವನ್ನು ಮೆಡಿಕಲ್ ಕಾಲೇಜಿಗೆ ನೀಡುವಂತೆ ಕರುನಾಡ ವಿಜಯಸೇನೆ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 24 : ಜಿ.ಆರ್.ಹಳ್ಳಿ ಹತ್ತಿರವಿರುವ ಜ್ಞಾನಗಂಗೋತ್ರಿ ವಿಶ್ವವಿದ್ಯಾಲಯವನ್ನು ಮೆಡಿಕಲ್ ಕಾಲೇಜಿಗೆ ನೀಡಿ ಬೆಂಗಳೂರು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿಗಳ ಹೊಸ ಕಟ್ಟಡಕ್ಕೆ ಜ್ಞಾನಗಂಗೋತ್ರಿ ಸ್ನಾತಕೋತ್ತರ ಕೇಂದ್ರವನ್ನು ಸ್ಥಳಾಂತರಿಸುವಂತೆ ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿ, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗೆ ಮನವಿ ಸಲ್ಲಿಸಿದರು.

ದ್ವಿತೀಯ ಪಿ.ಯು.ಸಿ.ಯಲ್ಲಿ ತೇರ್ಗಡೆಯಾಗುವ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿವಿಧ ವೈದ್ಯಕೀಯ ಶಿಕ್ಷಣ ಕೋರ್ಸ್‍ಗಳನ್ನು ಈ ಸಾಲಿನ ಶೈಕ್ಷಣಿಕ ವರ್ಷದಿಂದ ಪ್ರಾರಂಭಿಸಿ ದಾಖಲಾತಿಗೆ ಅನುಮತಿ ಕೊಡಬೇಕು. ಕೆಲವು ಖಾಸಗಿ ಕಾಲೇಜುಗಳಲ್ಲಿ ಅತಿ ಹೆಚ್ಚು ಶುಲ್ಕ ಪಾವತಿಸಿ ವೈದ್ಯಕೀಯ ಶಿಕ್ಷಣ ಪಡೆಯುವುದು ಬಡ ವಿದ್ಯಾರ್ಥಿಗಳಿಗೆ ಕಷ್ಟವಾಗುತ್ತದೆ. ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ತೇರ್ಗಡೆಯಾಗುವ ಬಡ ವಿದ್ಯಾರ್ಥಿಗಳು ವೈದ್ಯಕೀಯ ಸಂಬಂಧಿ ಬೇರೆ ಬೇರೆ ಕೋರ್ಸ್‍ಗಳಿಗೆ ದಾಖಲಾತಿ ಪಡೆಯಲು ತುರ್ತಾಗಿ ಬಿಎಸ್ಸಿ. ಅಲೈಡ್ ಹೆಲ್ತ್ ಸೈನ್ಸ್, ಬಿಎಸ್ಸಿ. ಅನಸ್ತೇಶಿಯಾ ಮತ್ತು ಆಪರೇಷನ್ ಥಿಯೇಟರ್ ಟೆಕ್ನಾಲಜಿ, ಇನ್ನಿತರೆ ಕೋರ್ಸ್‍ಗಳನ್ನು ಮಂಜೂರು ಮಾಡುವಂತೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಜಿಲ್ಲಾಧಿಕಾರಿಯವರಲ್ಲಿ ಒತ್ತಾಯಿಸಿದರು.

ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಗ್ರಾಮಾಂತರ ಘಟಕದ ಅಧ್ಯಕ್ಷೆ ಕಮಲಮ್ಮ, ಉಪಾಧ್ಯಕ್ಷೆ ರತ್ನಮ್ಮ, ನಗರಾಧ್ಯಕ್ಷ ಅವಿನಾಶ್, ಮುಜಾಹಿದ್, ಜಗದೀಶ್, ಚಂದನ, ಶಶಿಧರ್, ಸುರೇಶ್, ಅಖಿಲೇಶ್, ವಿಜಯಬಾಬು ಇವರುಗಳು ಪ್ರತಿಭಟನೆಯಲ್ಲಿ ಹಾಜರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now