ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ಅಮಾನತು : ಕರುನಾಡ ವಿಜಯಸೇನೆ ಪ್ರತಿಭಟನೆ

1 Min Read

 

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 07 : ಆರ್.ಸಿ.ಬಿ. ತಂಡ ಹದಿನೆಂಟು ವರ್ಷಗಳ ನಂತರ ಫೈನಲ್ ಕಪ್ ಗೆದ್ದಿರುವುದಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಏರ್ಪಡಿಸಲಾಗಿದ್ದ ಸಂಭ್ರಮಾಚರಣೆ ವೇಳೆ ಉಂಟಾದ ನೂಕು ನುಗ್ಗಲಿನಲ್ಲಿ 11 ಮಂದಿ ಬಲಿಯಾಗಿರುವುದಕ್ಕೆ ಬೆಂಗಳೂರಿನ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಕರುನಾಡ ವಿಜಯಸೇನೆಯಿಂದ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ನಗರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.

ಯಾವುದೇ ಪೂರ್ವ ಸಿದ್ದತೆಯಿಲ್ಲದೆ ಏಕಾಏಕಿ ರಾಜ್ಯ ಸರ್ಕಾರ ಸಂಭ್ರಮಾಚರಣೆಯ ತೀರ್ಮಾನ ತೆಗೆದುಕೊಂಡು ಎಸಗಿದ ಎಡವಟ್ಟಿನಿಂದ ಹನ್ನೊಂದು ಮಂದಿಯ ಬಲಿಯಾಗಿದೆಯೇ ವಿನಃ ಪೊಲೀಸರ ನಿರ್ಲಕ್ಷೆಯಿಂದಲ್ಲ. ಅದಕ್ಕಾಗಿ ಪೊಲೀಸ್ ಅಧಿಕಾರಿಗಳಾದ ಬಿ.ದಯಾನಂದ್, ವಿಕಾಸ್‍ಕುಮಾರ್, ಹೆಚ್.ಟಿ.ಶೇಖರ್, ಬಾಲಕೃಷ್ಣ

ಗಿರೀಶ್ ಎ.ಕೆ. ಇವರುಗಳನ್ನು ಅಮಾನತ್ತುಗೊಳಿಸಿರುವುದು ಯಾವ ನ್ಯಾಯ? ಕೂಡಲೆ ಅಮಾನತ್ತು ಆದೇಶವನ್ನು ಹಿಂದಕ್ಕೆ ಪಡೆಯಬೇಕು. ಈಗಾಗಲೆ ಸಾಕಷ್ಟು ಹಗರಣದಲ್ಲಿ ಸಿಲುಕಿಕೊಂಡಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕು. ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕೂಡ ನೈತಿಕ ಹೊಣೆ ಹೊತ್ತು ಅಧಿಕಾರದಿಂದ ಕೆಳಗಿಳಿಯಬೇಕೆಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.

ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಅಣ್ಣಪ್ಪ, ಅವಿನಾಶ್, ಹರೀಶ್‍ಕುಮಾರ್, ಜಗದೀಶ್, ಯಶವಂತ್

ಕಮಲಮ್ಮ, ಮಧುಸೂದನ್, ನಾಗೇಶ್, ಶಶಿಧರ್, ಅಖಿಲೇಶ್, ವಿಜಯಬಾಬು, ನಿವೃತ್ತ ಸಬ್‍ಇನ್ಸ್‍ಪೆಕ್ಟರ್ ನಾಗರಾಜ್ ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *