ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 21 : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿರುವ ಎಲ್ಲಾ ಭಾಗ್ಯಗಳನ್ನು ನಿಲ್ಲಿಸಿ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಕರುನಾಡ ವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿ ಮಕ್ಕಳು ಹಾಗೂ ಪೋಷಕರುಗಳು ಖಾಸಗಿ ಶಾಲೆಗಳ ಮೇಲೆ ವ್ಯಾಮೋಹವಿಟ್ಟುಕೊಂಡಿರುವುದರಿಂದ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿರುವುದು ದುರಂತ. ರಾಜ್ಯದ ಮುಖ್ಯಮಂತ್ರಿಯಿಂದ ಹಿಡಿದು ಉನ್ನತ ಹುದ್ದೆಯಲ್ಲಿರುವ ಬಹುತೇಕ ಅಧಿಕಾರಿಗಳು ಸರ್ಕಾರಿ ಶಾಲೆಗಳಲ್ಲಿಯೇ ಓದಿರುವುದು ಎನ್ನುವುದನ್ನು ಶಿಕ್ಷಣ ಸಚಿವರು ಮರೆಯಬಾರದೆಂದು ಎಚ್ಚರಿಸಿದರು.
ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆಯಿದೆ. ಹಾಗಾಗಿ ಮಾ. 7 ರಂದು ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಮಂಡಿಸಲಿರುವ ಬಜೆಟ್‍ನಲ್ಲಿ ಶಿಕ್ಷಣಕ್ಕೆ ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಹೆಚ್ಚಿನ ಅನುದಾನ ಮೀಸಲಿಡುವಂತೆ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.
ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಎಸ್.ಗೋಪಿನಾಥ್, ಕಾರ್ಯದರ್ಶಿ ಸಿ.ಜಗದೀಶ್, ಉಪಾಧ್ಯಕ್ಷೆ ರತ್ನಮ್ಮ, ಮುಜಾಹಿದ್, ನಿಸಾರ್‍ಅಹಮದ್, ಮೋಹನ್‍ಕುಮಾರ್, ಅಣ್ಣಪ್ಪ, ಯರ್ರಿಸ್ವಾಮಿ, ಸಿ.ತಿಪ್ಪೇಸ್ವಾಮಿ, ಪಾಂಡು, ಯಶವಂತ್, ಕಮಲ, ರಾಮಾಂಜನೇಯ, ಮಧು, ಅಖಿಲೇಶ್
ಸುರೇಶ್, ಅವಿನಾಶ್, ನಾಗರಾಜ್‍ಮುತ್ತು, ಹರೀಶ್‍ಕುಮಾರ್, ನಾಗೇಶ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್