Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಜಿಲ್ಲಾಧಿಕಾರಿ ದಿವ್ಯಪ್ರಭು ಅವರ ವರ್ಗಾವಣೆ ಬೇಡ : ಕರುನಾಡ ವಿಜಯಸೇನೆ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.31 : ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜಿ. ಇವರ ವರ್ಗಾವಣೆಯನ್ನು ರದ್ದುಪಡಿಸಿ ಇಲ್ಲಿಯೇ ಮುಂದುವರೆಸುವಂತೆ ಕರುನಾಡ ವಿಜಯಸೇನೆಯಿಂದ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ದಿವ್ಯಪ್ರಭುರವರು ಜಿಲ್ಲಾಧಿಕಾರಿಯಾಗಿ ಜಿಲ್ಲೆಗೆ ಆಗಮಿಸಿದಾಗಿನಿಂದಲೂ ಉತ್ತಮ ಆಡಳಿತ ನೀಡುತ್ತಿದ್ದು, ಸಾರ್ವಜನಿಕರ ಕುಂದುಕೊರತೆ, ಅಹವಾಲುಗಳನ್ನು ಸಮಾಧಾನದಿಂದ ಆಲಿಸುತ್ತಾರೆ. ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದವಿಲ್ಲ.

ಇಂತಹ ದಕ್ಷ ಅಧಿಕಾರಿಯನ್ನು ವರ್ಗಾವಣೆಗೊಳಿಸಿರುವುದರ ಹಿಂದೆ ರಾಜಕೀಯ ಪಿತೂರಿ ಅಡಗಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವರ್ಗಾವಣೆಯನ್ನು ರದ್ದುಪಡಿಸಬೇಕೆಂದು ಕರುನಾಡ ವಿಜಯಸೇನೆ ಕಾರ್ಯಕರ್ತರು ಒತ್ತಾಯಿಸಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಉಪಾಧ್ಯಕ್ಷೆ ರತ್ನಮ್ಮ ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...