Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಸಾಪ ವತಿಯಿಂದ ಕನ್ನಡ ಭಾಷಾ ಸಾಧಕರಿಗೆ ಕನ್ನಡ ಕುವರ, ಕುವರಿ ಪ್ರಶಸ್ತಿ ಪ್ರದಾನ

---Advertisement---

 

 

ಸುದ್ದಿಒನ್, ಚಿತ್ರದುರ್ಗ, ಮೇ. 27 : ಕನ್ನಡ ಭಾಷೆಯಲ್ಲಿ ಸಾಧನೆ ತೋರಿದವರಿಗೆ ಉಳಿದ ಭಾಷೆಗಳು ಕಠಣಿವಾಗುವುದಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಹೇಳಿದರು.

ನಗರದ ಎಸ್‍ಎಂಎಸ್ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಕುವರ, ಕುವರಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನದಲ್ಲಿ ಶಿಸ್ತಿನಿಂದ ಅಭ್ಯಸಿಸಿದರೆ ಎಂತಹ ಕಠಿಣ ಪರೀಕ್ಷೆಗಳನ್ನು ಎದುರಿಸುವ ಧೈರ್ಯ ಉಂಟಾಗುತ್ತದೆ. ಕನ್ನಡ ನಮ್ಮ ಮಾತೃ ಭಾಷೆ, ನಿಮ್ಮ ಮನೆಯ ಭಾಷೆ. ಮಾತೃಭಾಷೆಯಲ್ಲಿ ಉತ್ತಮ ಜ್ಞಾನವಿದ್ದರೆ ಉಳಿದ ವಿಷಯಗಳಲ್ಲಿ ನೀವು ಅದ್ಭುತವಾದ ಸಾಧನೆಯನ್ನು ಮಾಡಬಹುದಾಗಿದೆ ಈ ವಿಷಯದಲ್ಲಿ ನೀವು ಪ್ರೌಢಹಂತದಲ್ಲಿಯೇ 125ಕ್ಕೆ 125 ಅಂಕಗಳನ್ನು ಪಡೆದಿರುವುದು ಶ್ಲಾಘನೀಯವಾದುದು. ನಮ್ಮ ಭಾಷೆಯಲ್ಲಿ ಉತ್ತಮ ಅಂಕ ಪಡೆದವರು ಇತರೆ ಭಾಷೆಗಳನ್ನು ಸುಲಭವಾಗಿ ಕಲಿಯುತ್ತಾರೆ. ಕನ್ನಡವನ್ನು ಚೆನ್ನಾಗಿ ಅಭ್ಯಾಸ ಮಾಡಿದರೆ ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಹಾಯವಾಗುತ್ತದೆ. ಬಹುತೇಕ ಗ್ರಾಮೀಣ ಪ್ರದೇಶಗಳಿಂದ ಬಂದಿರುವಂತಹ ನೀವುಗಳು ಮುಂದಿನ ಹಂತದಲ್ಲಿ ಉತ್ತಮ ಸಾಧನೆ ಮಾಡಿ ನೀವು ಇನ್ನೊಬ್ಬರನ್ನು ಸನ್ಮಾನಿಸುವ ಹಂತಕ್ಕೆ ಬೆಳೆಯಬೇಕು ಎಂದು ಹೇಳಿದರು.

 

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ಮಾತನಾಡಿ, ಕನ್ನಡಭಾಷೆ ಇಂಗ್ಲೀಷ್‍ಗಿಂತಹ ಕಠಿಣವಾದುದು. ಆದರೆ ಮಾತೃಭಾಷೆಯಾದ್ದರಿಂದ ನಿಮಗೆ ಸಾಧನೆ ಮಾಡಲು ಸಾಧ್ಯವಾಗಿದೆ. ನಿಮ್ಮ ಕನ್ನಡ ಪ್ರೇಮ ಹೀಗೆ ಇರಲಿ ಮುಂದೆ ನಿಮ್ಮ ಭವಿಷ್ಯವನ್ನು ರೂಪಿಸಲು ಸಹಕಾರಿಯಾಗುತ್ತದೆ. ವಿದ್ಯಾಭ್ಯಾಸದ ಮುಂದಿನ ಹಂತಗಳಲ್ಲಿ ನೀವು ಯಾವ ಭಾಷೆಯಲ್ಲಾದರೂ ಜ್ಞಾನ ಪಡೆಯಿರಿ ಕನ್ನಡವನ್ನು ಬಳಸಿ,ಉಳಿಸಿ. ಭಾಷೆಯ ಸಾಧಕರೆಗೆ ಸಾಹಿತ್ಯ ಪರಿಷತ್ತು ಜಿಲ್ಲಾ ಮಟ್ಟದಲ್ಲಿ ಅಭಿನಂದಿಸುತ್ತಿದೆ. ಇದರಿಂದ ಈ ವಿದ್ಯಾರ್ಥಿಗಳು ಕನ್ನಡದಲ್ಲಿ ಇನ್ನಷ್ಟು ಸಾಧನೆಗಳನ್ನು ತೋರಲಿ ಎಂದರು.

ಕನ್ನಡ ವಿಷಯ ಪರಿವೀಕ್ಷಕ ಸಿ.ರಂಗನಾಯ್ಕ ಮಾತನಾಡಿ, ಕನ್ನಡ ವಿಷಯದಲ್ಲಿ ಈ ಬಾರಿ ಜಿಲ್ಲೆಯಲ್ಲಿ 196 ವಿದ್ಯಾರ್ಥಿಗಳು 125ಕ್ಕೆ 125 ಅಂಕಗಳನ್ನು ಪಡೆದಿದ್ದಾರೆಂದರೆ ಹೆಮ್ಮೆಯ ವಿಷಯವಾಗಿದೆ. ನೀವು ಕನ್ನಡವನ್ನು ಬೆಳೆಸುವ ರಾಯಭಾರಿಗಳಾಗಿರಿ ಎಂದರು.

ಚಿತ್ರದುರ್ಗ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ವಿ.ಎಲ್.ಪ್ರಶಾಂತ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಡಿಯಾನ ಎಸ್‍ಜೆಎಂ ಹಾರ್ಟ್ ಸೆಂಟರ್‍ನ ಕಾರ್ಯನಿರ್ವಾಹಕ ಅಧಿಕಾರಿ ರೂಪೇಶ್‍ಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ಕುರಿತು ಮಾತನಾಡಿದರು. ಕಸಾಪ ಜಿಲ್ಲಾ ಕೋಶಾಧ್ಯಕ್ಷ ಡಾ.ಚೌಳೂರು ಲೋಕೇಶ್ ಮತ್ತಿತರರಿದ್ದರು. ಕಾರ್ಯಕ್ರಮದಲ್ಲಿ ಹತ್ತನೇ ತರಗತಿ ಕನ್ನಡ ವಿಷಯ ಪರೀಕ್ಷೆಯಲ್ಲಿ 125ಕ್ಕೆ 125 ಅಂಕ ಪಡೆದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now