ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 07 : ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ ಕಾಟಿಹಳ್ಳಿ ಕರಿಯಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಮೈಲಾರಪ್ಪ, ಖಜಾಂಚಿಯಾಗಿ ಎಸ್.ಎಂ.ಎಲ್. ಪ್ರವೀಣ್ ಇವರುಗಳನ್ನು ಮೂರು ವರ್ಷಗಳ ಅವಧಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಜಾನುಕೊಂಡ ಸಮೀಪವಿರುವ ರಂಗನಾಥಸ್ವಾಮಿ ಬೆಟ್ಟದಲ್ಲಿ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ರವರ ಸಮ್ಮುಖದಲ್ಲಿ ನಡೆದ ಮಹಾಸಭೆಯಲ್ಲಿ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ಆಯ್ಕೆ ಮಾಡಲಾಯಿತು. ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶಪ್ಪ, ಅನ್ವರ್ಭಾಷ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.










