ಚಿತ್ರದುರ್ಗ, ಆ.02 : ನಗರದ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೂರು ಸಾವು ಸಂಭವಿಸಿರುವ ಘಟನೆ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡುವಂತೆಯೂ ಸಿಎಂ ಸೂಚನೆ ನೀಡಿದ್ದಾರೆ.
ಚಿತ್ರದುರ್ಗ ಜಿಲ್ಲಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು, ಘಟನೆಗೆ ಯಾರೇ ಕಾರಣರಾಗಿದ್ದರೂ ಕ್ರಮ ಜರುಗಿಸುವಂತೆ ಸೂಚಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












