Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕವಾಡಿಗರಹಟ್ಟಿ ಪ್ರಕರಣ: ತನಿಖೆಯ ವರದಿ ಆಧರಿಸಿ ಕಠಿಣ ಕ್ರಮ : ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಹೇಳಿಕೆ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ,(ಆ.6) : ಕವಾಡಿಗರಹಟ್ಟಿ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ತನಿಖೆ ಆರಂಭವಾಗಿದೆ. ತನಿಖೆಯ ವರದಿ ಆಧರಿಸಿ, ತಪ್ಪು ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ತಿಳಿಸಿದರು.

ಇಲ್ಲಿನ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾದ ಸಂತ್ರಸ್ಥರ ಭೇಟಿ ಹಾಗೂ ಮೃತ ಕುಟುಂಬಗಳಿಗೆ ಸಾಂತ್ವನ ಹೇಳಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಚಿತ್ರದುರ್ಗ ನಗರದ ವ್ಯಾಪ್ತಿಯ ಯಾವುದೇ ವಾರ್ಡ್‍ನಲ್ಲಿ ಸಮಸ್ಯೆಯಾಗಿಲ್ಲ. ಕವಾಡಿಗರಹಟ್ಟಿಯಲ್ಲಿ ಮಾತ್ರ ಸಮಸ್ಯೆಯಾಗಿದ್ದು, ಕವಾಡಿಗರಹಟ್ಟಿ ಕಲುಷಿತ ನೀರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಲೊನಿಯ ಪ್ರತಿ ಮನೆ ಮನೆಯನ್ನೂ ಪರೀಕ್ಷೆ ಮಾಡಲು ಸೂಚಿಸಲಾಗಿದ್ದು, ಈಗಾಗಲೇ ಪರೀಕ್ಷೆ ಪ್ರಾರಂಭವಾಗಿದ್ದು, ಇನ್ನೆರೆಡು ದಿನಗಳಲ್ಲಿ ಸಂಪೂರ್ಣ ವರದಿ ಬರುವ ನಿರೀಕ್ಷೆ ಇದ್ದು,  ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿರ್ಲಕ್ಷೆ, ಕರ್ತವ್ಯಲೋಪ ತೋರಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಎಫ್‍ಎಸ್‍ಎಲ್ ವರದಿ ಮರು ತನಿಖೆ: ಕವಾಡಿಗರಹಟ್ಟಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಫ್‍ಎಸ್‍ಎಲ್ ವರದಿಯನ್ನು ಮರು ತನಿಖೆ ಮಾಡುವಂತೆ ಸಾರ್ವಜನಿಕರು ಮನವಿ ಮಾಡಿದ್ದು, ಈ ಕುರಿತು ಅಗತ್ಯ ಕ್ರಮವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಎಫ್‍ಎಸ್‍ಎಲ್ ವರದಿ ಕುರಿತಂತೆ ಸಾರ್ವಜನಿಕ ಅನುಮಾನ ವ್ಯಕ್ತಪಡಿಸುತ್ತಿದ್ದು, ಎಸ್‍ಎಸ್‍ಎಲ್ ವರದಿಯನ್ನು ಮರು ತನಿಖೆ ಮಾಡುವ ಮೂಲಕ ಸಾರ್ವಜನಿಕರ ಅನುಮಾನವನ್ನು ಬಗೆಹರಿಸಲಾಗುವುದು ಎಂದು ಹೇಳಿದರು.

ನಗರದ ವ್ಯಾಪ್ತಿಯ ಜಲಸಂಗ್ರಹಾಗಾರಗಳು ಓವರ್ ಹೆಡ್ ಟ್ಯಾಂಕ್‍ಗಳು, ಸಣ್ಣ ನೀರಿನ ಟ್ಯಾಂಕ್‍ಗಳನ್ನು ಸ್ವಚ್ಚಗೊಳಿಸುವ ಅನುದಾನ ದುರುಪಯೋಗ ಪಡಿಸಿಕೊಂಡು ಶುಚಿಗೊಳಿಸದ ಪರಿಣಾಮ ಇಂತಹ ದುರ್ಘಟನೆಗೆ ಸಂಭವಿಸಿವೆ ಎಂಬ ದೂರುಗಳು ಕೇಳಿ ಬಂದಿವೆ. ಕವಾಡಿಗರಹಟ್ಟಿ ಕಾಲೊನಿಯ ಟ್ಯಾಂಕ್ ಮೇಲ್ನೋಟಕ್ಕೆ ಹಾಗೆಯೇ ಕಾಣುತ್ತಿದೆ. ಈ ಕುರಿತು ಸಮಗ್ರ ವರದಿ ಪಡೆಯಲಾಗುವುದು ಎಂದರು.

ಅಧಿಕಾರಿ, ಸಿಬ್ಬಂದಿಗಳ ಅಮಾನತು ಪ್ರಕರಣಕ್ಕೆ ಪರಿಹಾರವಲ್ಲ. ತನಿಖೆ ಆದ ಮೇಲೆಯೂ ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಸೂಕ್ತ ಕ್ರಮಕೈಗೊಳ್ಳಲಾಗುವುದು. ಸಮಸ್ಯೆ ಉಂಟಾದಾಗ ಮಾತ್ರ ಅಧಿಕಾರಿಗಳು ಬರುತ್ತಾರೆ ಎಂಬ ದೂರುಗಳು ಇವೆ. ಆದರೆ ಸಮಸ್ಯೆ ಉದ್ಭವಿಸದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಹಿಸಬೇಕು. ಹೀಗಾಗಿ ಮುಂಜಾಗ್ರತಾ ಕ್ರಮಕೈಗೊಳ್ಳದವರ ವಿರುದ್ಧವೂ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಮೃತ ಕುಟುಂಬಕ್ಕೆ ತಲಾ ರೂ.25 ಲಕ್ಷ ರೂ ಪರಿಹಾರಕ್ಕೆ ಬೇಡಿಕೆ ಮುಂದಿಟ್ಟಿದ್ದಾರೆ ಎಂಬ ಪ್ರಶ್ನಿಗೆ ಪ್ರತಿಕ್ರಿಯಿಸಿದ ಸಚಿವರು, ಈಗಾಗಲೇ ತಲಾ 10 ಲಕ್ಷ ರೂ. ವಿತರಿಸಲಾಗಿದೆ. ಆರೋಗ್ಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರು ಸೇರಿದಂತೆ ಪರಿಹಾರ ಹೆಚ್ಚಿಸುವ ಕುರಿತು ಮುಖ್ಯಮಂತ್ರಿಗಳ ಭೇಟಿ ಮಾಡಲಿದ್ದೇವೆ ಎಂದರು.

ಮೃತ ಕುಟುಂಬಗಳಿಗೆ ಸಾಂತ್ವನ: ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಕವಾಡಿಗರಹಟ್ಟಿಗೆ ಭೇಟಿ ನೀಡಿ, ಮೃತ ಕುಟುಂಬಗಳಿಗೆ ಸಾಂತ್ವನ ಹೇಳಿದರು.
ನಂತರ ನಗರದ ಜಿಲ್ಲಾಸ್ಪತ್ರೆ ಹಾಗೂ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿ, ಅಸ್ವಸ್ಥರ ಯೋಗ-ಕ್ಷೇಮ ವಿಚಾರಿಸಿದರು.

ಈ ಸಂದರ್ಭದಲ್ಲಿ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ, ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕಿ ಎನ್.ಮಂಜುಶ್ರೀ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮಹೇಂದ್ರಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!