Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕವಾಡಿಗರಹಟ್ಟಿ ಪ್ರಕರಣ : ಎಫ್ಎಸ್ಎಲ್ ವರದಿಯಲ್ಲೇನಿದೆ ? ಎಸ್.ಪಿ. ಪರುಶುರಾಮ ಮಾಹಿತಿ

---Advertisement---

 

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಹೊರವಲಯದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿದ್ದರು ಮತ್ತು ನೂರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳಿಂದ  ಕಾಯುತ್ತಿದ್ದ ಎಫ್ಎಸ್ಎಲ್ ವರದಿ ಇಂದು (ಗುರುವಾರ) ರಾತ್ರಿ ಬಂದಿದೆ.

ಈ ವರದಿ ಪ್ರಕಾರ, ಕವಾಡಿಗರಹಟ್ಟಿಯಲ್ಲಿನ ಘಟನೆಗೆ ಕಾರಣವಾದ ಕಲುಷಿತ ನೀರಿನಲ್ಲಿ ಯಾವುದೇ ವಿಷಕಾರಿ ಅಂಶ ಕಂಡುಬಂದಿಲ್ಲ ಎಂದು ವರದಿಯಲ್ಲಿ ತಿಳಿದು ಬಂದಿದೆ ಎಂದು ಎಸ್ಪಿ ಪರುಶುರಾಮ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಮಧ್ಯಾನ್ಹ ಬಂದ ಜಿಲ್ಲಾ ಸರ್ವೇಕ್ಷಣಾ ಘಟಕದ ವರದಿಯಲ್ಲಿ ಕವಾಡಿಗರಹಟ್ಟಿಯಲ್ಲಿನ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ವರದಿ ಸಲ್ಲಿಸಿದ್ದರು.

ಮೂವರ ಸಾವು ಮತ್ತು ನೂರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು ಜನರಲ್ಲಿ ತೀವ್ರ ಆತಂಕ ಸೃಷ್ಟಿಯಾಗಿತ್ತು. ಇದರಿಂದಾಗಿ ನೀರಿನಲ್ಲಿ ವಿಷ ಬೆರೆಸಿದ್ದಾರಾ ? ಎಂಬ ಶಂಕೆ ವ್ಯಕ್ತವಾಗಿತ್ತು.ಇದೀಗ ಬಂದ ಎಫ್ಎಸ್ಎಲ್ ವರದಿಯಿಂದ ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment